ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಕೋಮು ಸೂಕ್ಷ್ಮ ಜಿಲ್ಲೆ ಇದೀಗ ಬೂದಿ ಮುಚ್ಚಿದ ಕೆಂಡದಂತಾಗಿದೆ. 3 ದಿನಗಳ ಕಾಲ ಕಠಿಣ ಪರಿಸ್ಥಿತಿ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
Advertisement
ಈ ಬೆನ್ನಲ್ಲೇ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು. ವಿವಿಧ ಜಿಲ್ಲೆಗಳಿಂದ 2 ಸಾವಿರಕ್ಕೂ ಅಧಿಕ ಪೊಲೀಸರನ್ನು ಕರೆಸಿ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಪಥ ಸಂಚಲನ ನಡೆಸಿ ದುಷ್ಕೃತ್ಯ ನಡೆಸುವವರಿಗೆ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷ ಹರಡುವವರ ಮೇಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಆಗಸ್ಟ್ 1ರ ವರೆಗೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಎಲ್ಲಾ ಮದ್ಯದ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ವರುಣನ ಆರ್ಭಟ – 4 ತಾಲೂಕಿನ ಶಾಲೆಗಳಿಗೆ ರಜೆ
Advertisement
Advertisement
ಕೇವಲ ಅಗತ್ಯ ಸೇವೆಗಳಿಗೆ, ಅಗತ್ಯ ಸಂಚಾರಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಹೋಟೆಲ್, ಮಾಲ್‍ಗಳು ಸಹ ಬಂದ್ ಇರಲಿದೆ. ಈ ಮಧ್ಯೆ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಮುಖಂಡರು, ಎಲ್ಲ ಪಕ್ಷದ ನಾಯಕರು, ವಿವಿಧ ಸಂಘಟನೆ ಮುಖಂಡರ ಸಮ್ಮುಖದಲ್ಲಿ ಇಂದು ಬೆಳಗ್ಗೆ 11ಕ್ಕೆ ಶಾಂತಿಸಭೆ ನಡೆಯಲಿದೆ. ಕರಾವಳಿ ಜಿಲ್ಲೆ ಈಗ ಖಾಕಿ ಭದ್ರಕೋಟೆಯಂತಾಗಿದೆ. ಇದನ್ನೂ ಓದಿ: ಈಗ ಲೋಕಸಭಾ ಚುನಾವಣೆ ನಡೆದರೆ ಎನ್‍ಡಿಎಗೆ 362 ಸ್ಥಾನ!
Advertisement
ಬೆಳ್ಳಾರೆಯಲ್ಲಿ ಮಸೂದ್, ಪ್ರವೀಣ್ ಹತ್ಯೆ ಬೆನ್ನಲ್ಲೇ ಗುರುವಾರ ರಾತ್ರಿ ಮಂಗಳೂರು ನಗರದ ಹೊರವಲಯದ ಸುರತ್ಕಲ್‍ನಲ್ಲಿ ಫಾಜಿಲ್ ಎಂಬ ಯುವಕನನ್ನು ಹಂತಕರು ಕೊಚ್ಚಿ ಕೊಲೆ ಮಾಡಿದ್ದರು. ಆ ಬಳಿಕ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಈ ನಡುವೆ ಈವರೆಗೂ ಫಾಜಿಲ್ ಹತ್ಯೆಗೆ ಕಾರಣವಾಗಲೀ, ಹಂತಕರಾಗಲಿ ಸಿಕ್ಕಿಲ್ಲ. ಆದರೆ, ಫಾಜಿಲ್ ಹತ್ಯೆ ಸಂಬಂಧ 21 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.