ಮಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣವನ್ನು ಎನ್‌ಐಎ ತಂಡ ದೆಹಲಿ ಕಚೇರಿಯಲ್ಲಿ ಎಫ್‌ಐಆರ್ ದಾಖಲಿಸಿ ಅಧಿಕೃತವಾಗಿ ತನಿಖೆ ಆರಂಭಿಸಿದೆ.
ಈಗಾಗಲೇ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಬಂಧಿಸಿದ ಆರೋಪಿಗಳು ಸೇರಿ ನಾಪತ್ತೆಯಾದವರ ಮೇಲೂ ಎನ್‌ಐಎ ತಂಡ ಎಫ್‌ಐಆರ್ ದಾಖಲಿಸಿದೆ. ಜೊತೆಗೆ ಈ ಎಫ್‌ಐಆರ್ ಪ್ರತಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದು, ಐಪಿಸಿ 302, 34 ಸೇರಿ ಹಲವು ಕಲಂಗಳ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
Advertisement
Advertisement
ಪ್ರವೀಣ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಎನ್‌ಐಎ ತಂಡ ತನಿಖೆಯನ್ನು ಪ್ರಾರಂಭಿಸಿದ್ದು, ಈಗಾಗಲೇ ಸುಳ್ಯ, ಪುತ್ತೂರಿನಲ್ಲಿ ಬೀಡು ಬಿಟ್ಟಿದೆ. ಅಷ್ಟೇ ಅಲ್ಲದೇ ತನಿಖೆಯನ್ನು ಚುರುಕುಗೊಳಿಸಿದ್ದು, ನಾಪತ್ತೆಯಾಗಿರುವ ಆರೋಪಿಗಳಿಗೆ ಶೋಧ ಕಾಯವನ್ನು ಆರಂಭಿಸಿದೆ. ಬೆಳ್ಳಾರೆ ಪೊಲೀಸರಿಂದ ಕೇಸ್ ಫೈಲ್ ಪಡೆದು ತನಿಖೆ ಆರಂಭಿಸಿರುವ ಎನ್‌ಐಎ ತಂಡ ಕುಟುಂಬದವರ ಹೇಳಿಕೆ, ದೂರುದಾರನ ಹೇಳಿಕೆಗಳು ಹಾಗೂ ಪೊಲೀಸರು ಸಂಗ್ರಹಿಸಿದ ಸಿಸಿಟಿವಿಗಳನ್ನು ಪರಿಶೀಲಿಸಿದೆ. ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ಕೂಲಂಕುಷವಾಗಿ ಮಾಹಿತಿ ಕಲೆ ಹಾಕಿದ್ದು, ಬಂಧಿತ ಆರೋಪಿಗಳನ್ನ ವಿಚಾರಣೆ ನಡೆಸುತ್ತಿದೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ- ಅಧಿಕೃತ ಆದೇಶಕ್ಕೆ ಮೊದ್ಲೇ NIA ತನಿಖೆ
Advertisement
Advertisement
ನಿನ್ನೆ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಸುಳ್ಯದ ನಾವೂರ್ ನಿವಾಸಿ ಅಬಿದ್ (22), ಬೆಳ್ಳಾರೆಯ ಗೌರಿಹೊಳೆ ನಿವಾಸಿ ನೌಫಲ್(28) ಬಂಧಿತ ಆರೋಪಿಗಳಾಗಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಈವರೆಗೆ 6 ಆರೋಪಿಗಳನ್ನು ಬಂಧಿಸಲಾಗಿದೆ. ಇದನ್ನೂ ಓದಿ: BJP ಮುಖಂಡ ಪ್ರವೀಣ್ ಹತ್ಯೆ ಕೇಸ್ – ಮತ್ತಿಬ್ಬರು ಅರೆಸ್ಟ್