ಬೆಂಗಳೂರು: ಬಿಜೆಪಿ ಕಾರ್ಯಕರ್ತ ದಿವಂಗತ ಪ್ರವೀಣ್ ಕುಮಾರ್ ನೆಟ್ಟಾರು (Praveen Kumar Nettar) ಅವರ ಧರ್ಮಪತ್ನಿ ನೂತನ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಭೇಟಿಯಾಗಿ ಸರ್ಕಾರದಿಂದ ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿದ್ದಕ್ಕಾಗಿ ಹಾಗೂ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದ್ದಾರೆ.
Advertisement
ಬಿಜೆಪಿ ಕಾರ್ಯಕರ್ತ ದಿವಂಗತ ಪ್ರವೀಣ್ ಕುಮಾರ್ ನೆಟ್ಟಾರು ಅವರ ಧರ್ಮಪತ್ನಿ ಶ್ರೀಮತಿ ನೂತನ ಅವರು ಬಿಜೆಪಿ ರಾಜ್ಯಾದ್ಯಕ್ಷರಾದ ನಳಿನ್ ಕುಮಾರ್ ಕಟೀಲ್ (Nalinkumar Kateel) ಅವರೊಂದಿಗೆ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು. ಸರ್ಕಾರದಿಂದ ಕೆಲಸ ಕೊಡಿಸಿ ಮಂಗಳೂರಿನಲ್ಲಿ ಕಾರ್ಯನಿರ್ವಹಿಸಲು ಸಹಕರಿಸಿದಕ್ಕಾಗಿ ಧನ್ಯವಾದ ಸಮರ್ಪಿಸಿದರು. ಇದನ್ನೂ ಓದಿ: ಮದರಸಾದಲ್ಲಿ 1985ರಿಂದಲೂ ಪೂಜೆ ಇತ್ತು, ಪೊಲೀಸರ ಅನುಮತಿ ಸಿಕ್ಕಿತ್ತು: ಹಿಂದೂ ಮುಖಂಡರ ಸ್ಪಷ್ಟನೆ
Advertisement
ಬಿಜೆಪಿ ಕಾರ್ಯಕರ್ತ ದಿ. ಶ್ರೀ ಪ್ರವೀಣ್ ನೆಟ್ಟಾರು ಅವರ ಧರ್ಮಪತ್ನಿ ಶ್ರೀಮತಿ ನೂತನ ಅವರು ರಾಜ್ಯಾಧ್ಯಕ್ಷ ಶ್ರೀ @nalinkateel ಅವರ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಶ್ರೀ @BSBommai ಅವರನ್ನು ಭೇಟಿ ಮಾಡಿ, ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಹಾಗೂ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿ ಕೊಟ್ಟಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದರು. pic.twitter.com/pYgZgArqZ1
— BJP Karnataka (@BJP4Karnataka) October 7, 2022
Advertisement
ಸರ್ಕಾರದಿಂದ ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿ ಸಿಎಂ ಕಚೇರಿಯಲ್ಲಿ ಕೆಲಸ ಕೊಡುವುದಾಗಿ ಸಿಎಂ ಹೇಳಿದ್ದರು. ಈ ವೇಳೆ ಮಂಗಳೂರಿನಲ್ಲಿ ಕೆಲಸ ಕೊಡುವಂತೆ ಬೇಡಿಕೆ ಕೇಳಿ ಬಂದಿತ್ತು. ಇದನ್ನು ಮನಗಂಡು ಬೊಮ್ಮಾಯಿ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ PayCM ಕ್ಯಾಂಪೇನ್ – ಬಿಜೆಪಿ ನಾಯಕರಿಗೆ ಹೈಕಮಾಂಡ್ ಕ್ಲಾಸ್