ಮಂಗಳೂರು: ಬಿಜೆಪಿ ಯುವಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಏಳು ಮಂದಿ ಎಸ್‍ಡಿಪಿಐ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Advertisement
ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರು ದುಷ್ಕರ್ಮಿಗಳ ಕೈಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದರು. ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ಆರಂಭಿಸಿದ್ದು, ನಿನ್ನೆ ತಡರಾತ್ರಿ ಶಂಕಿತ ಆರೋಪದ ಹಿನ್ನೆಲೆ ಬೆಳ್ಳಾರೆ ಎಸ್‍ಡಿಪಿಐ ಕಾರ್ಯಕರ್ತರ ಮನೆಗೆ ನುಗ್ಗಿ ಏಳು ಮಂದಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ರಕ್ತದೋಕುಳಿಯ ಸ್ವಾಗತ ನಮಗೆ ಬೇಡ – ಜನೋತ್ಸವ ಕಾರ್ಯಕ್ರಮಕ್ಕೆ ಬರಲ್ಲ
Advertisement
Advertisement
ಇತ್ತ ಪೊಲೀಸರು ಏಳು ಮಂದಿಯನ್ನು ವಶಕ್ಕೆ ಪಡೆದ ಬೆನ್ನಲ್ಲೇ ಪೊಲೀಸರು ಅಮಾಯಕರನ್ನು ವಶಪಡಿಸಿಕೊಳ್ಳುತ್ತಿದ್ದಾರೆ ಎಂದು ಎಸ್‍ಡಿಪಿಐ ಆರೋಪಿಸಿದೆ. ಈವರೆಗೆ ಶಾಂತವಾಗಿದ್ದ ಕರಾವಳಿ ಪ್ರವೀಣ್ ಹತ್ಯೆಯ ಬಳಿಕ ಆಕ್ರೋಶ ಭುಗಿಲೆದ್ದಿದೆ. ಹಿಂದೂ ಕಾರ್ಯಕರ್ತರು ಜಿಲ್ಲೆಯ ಜನಪ್ರತಿನಿಧಿಗಳ ವಿರುದ್ಧ ಸಿಡಿದೆದ್ದಿದ್ದಾರೆ. ಪರಿಸ್ಥಿತಿ ತಿಳಿಗೊಳಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಇದನ್ನೂ ಓದಿ: ಪ್ರವೀಣ್ ಹತ್ಯೆಗೆ ಭುಗಿಲೆದ್ದ ಆಕ್ರೋಶ – ರಾಜ್ಯಾದ್ಯಂತ ಬಿಜೆಪಿ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ
Advertisement
ಏನಿದು ಘಟನೆ:
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.