ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಗಳು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.
Advertisement
ಸ್ಥಳೀಯನೊಬ್ಬ ಪ್ರವೀಣ್ ಚಲನವಲನದ ಬಗ್ಗೆ ಮಾಹಿತಿ ನೀಡಿದ್ದಾನೆ. ಒಟ್ಟಿನಲ್ಲಿ ಸ್ಥಳೀಯರೊಬ್ಬರ ಸಹಾಯದಿಂದ ಹತ್ಯೆಯಾಗಿದೆ ಎಂಬ ಮಾಹಿತಿ ಲಭಿಸಿದೆ. ಹೀಗಾಗಿ ಸ್ಥಳೀಯ ಪೊಲೀಸರು 8 ಜನರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಶಂಕಿತರ ಮಾಹಿತಿಯ ಬಳಿಕ ಹತ್ಯೆ ಮಾಡಿದವರು ಸ್ಥಳೀಯರು ಎಂದು ತಿಳಿದುಬಂದಿದ್ದು, ಬೇರೆ ರಾಜ್ಯದಿಂದ ಬಂದವರಾ ಅನ್ನೋದನ್ನು ತಿಳಿಯಬೇಕಿದೆ. ಒಬ್ಬ ಮಾತ್ರ ಸ್ಥಳೀಯವಾಗಿ ಸಹಾಯ ಮಾಡಿದ್ದು ದೃಢವಾಗಿದೆ.
Advertisement
Advertisement
ಪ್ರವೀಣ್ ಗೆ ಬೆದರಿಕೆ ಕರೆಯೂ ಬಂದಿರೋ ಬಗ್ಗೆ ಮಾಹಿತಿ ಇದೆ. ಹತ್ಯೆಗೂ ಮೂರು ದಿನದಿಂದ ಬೆದರಿಕೆ ಕರೆ ಬಂದಿದೆ ಎಂದಿದ್ದಾರೆ. ಆದರೆ ಬೆದರಿಕೆ ಕರೆಯ ಬಗ್ಗೆ ಪ್ರವೀಣ್ ಪೊಲೀಸರಿಗೆ ದೂರು ಕೊಟ್ಟಿಲ್ಲ. ಸ್ನೇಹಿತರ ಮಾಹಿತಿಯ ಮೇರೆಗೆ ಶಂಕಿತರ ವಶಕ್ಕೆ ಪಡೆಯಲಾಗಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 5 ಕ್ಕಿಂತ ಹೆಚ್ಚು ಜನ ನಿಲ್ಲದಂತೆ ಆದೇಶ- ನಾಳೆ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿ