ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಯುವಮೋರ್ಚಾ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಂಗಳವಾರ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಹತ್ಯೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್(33)ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 7 ಆರೊಪಿಗಳನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಎಸ್‌ಪಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ.
Advertisement
Advertisement
ಏನಿದು ಪ್ರಕರಣ?
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪ ಪರುವಾಜೆ ಕ್ರಾಸ್ ಬಳಿ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಕೋಳಿ ಮಾಂಸದಂಗಡಿ ಹೊಂದಿದ್ದ ಪ್ರವಿಣ್ ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಪ್ರವೀಣ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಗಟ್ಟಿಯಾಯ್ತು ಡಿಕೆ, ಸಿದ್ದು ಜೋಡಿ- ಪರಸ್ಪರ ಟೋಪಿ ಹಾಕಿಕೊಂಡ ನಾಯಕರು
Advertisement
Advertisement
ಪ್ರವಿಣ್ ಅವರನ್ನು ತಕ್ಷಣವೇ ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಕುತ್ತಿಗೆಯ ಭಾಗಕ್ಕೆ ತೀವ್ರವಾಗಿ ಏಟು ಬಿದ್ದಿದ್ದರಿಂದ ಅವರು ಮೃತಪಟ್ಟಿದ್ದರು. ಈ ಘಟನೆ ನಡೆದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೆ ಬಿಜೆಪಿ ಕಾರ್ಯಕರ್ತರೇ ಸರ್ಕಾರದ ವಿರುದ್ಧ ತಿರುಗಿ ಬಿದ್ದರು. ಈ ಬೆನ್ನಲ್ಲೇ ಸರ್ಕಾರ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಿತ್ತು. ಸದ್ಯ ಈವರೆಗೆ 7 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಯಾರೂ ಯಾಕೆ ನನ್ನ ಅರ್ಥ ಮಾಡಿಕೊಳ್ಳುತ್ತಿಲ್ಲ- ನೋವನ್ನು ಅಕ್ಷರ ರೂಪಕ್ಕಿಳಿಸಿದ ಚಂದನಾ ಹೇಳಿದ್ದೇನು..?