ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್‍ನಲ್ಲಿ ಇನ್ನಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ಕೊಲೆಗೆ ಸಹಕಾರ ಕೊಟ್ಟಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಮತ್ತಿಬ್ಬರನ್ನು ವಶಕ್ಕೆ ಪಡೆದಿದ್ದಾರೆ.
Advertisement
Advertisement
ಪ್ರವೀಣ್ ಹತ್ಯೆ ನಂತರ ಬೆಂಗಳೂರಿಗೆ ಬಂದು ಆರೋಪಿಗಳು ತಲೆಮರೆಸಿಕೊಂಡಿದ್ದರು. ಈ ಬಗ್ಗೆ ಬೆಂಗಳೂರಿನ ಓರ್ವ ಹಿರಿಯ ಐಪಿಎಸ್ ಅಧಿಕಾರಿಗೆ ಮಾಹಿತಿ ನೀಡಲಾಗಿತ್ತು. ಯಾವುದೇ ಮಾಹಿತಿ ಸೋರಿಕೆಯಾಗದೇ ಖಾಕಿ ತಂಡ ಕಾರ್ಯಾಚರಣೆ ಕೈಗೊಂಡಿತ್ತು. ಸುಳ್ಯ ಪೊಲೀಸರ ಜೊತೆಗೆ ಬೆಂಗಳೂರಲ್ಲಿ ಒಂದು ಟೀಂ ಆರೋಪಿಗಳ ಪತ್ತೆಗೆ ಸಾಥ್ ಕೊಟ್ಟಿತು. ಸದ್ಯ ಬೆಂಗಳೂರಲ್ಲಿ ಇಬ್ಬರನ್ನ ವಶಕ್ಕೆ ಪಡೆದು ಸುಳ್ಯ ಪೊಲೀಸರು ಕರೆದುಕೊಂಡು ಬಂದಿದ್ದಾರೆ. ಇದನ್ನೂ ಓದಿ: ಹಲಾಲ್, ಜಟ್ಕಾ ಜಟಾಪಟಿಯೇ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಕಾರಣವಾಯ್ತಾ..?
Advertisement
Advertisement
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನ ರಾಷ್ಟ್ರೀಯ ತನಿಖಾ ದಳಕ್ಕೆ ಕೊಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಕೇಂದ್ರಕ್ಕೆ ಪತ್ರ ಬರೆಯುವಂತೆ ಸೂಚಿಸ್ತೇನೆ ಅಂದಿದ್ದರು. ಆದರೆ ಸಿಎಂ ಘೋಷಣೆ ಮಾಡಿ 3 ದಿನವಾದ್ರೂ ಎನ್‍ಐಎ ತನಿಖೆಗೆ ರಾಜ್ಯ ಗೃಹ ಇಲಾಖೆ ಅಧಿಕೃತ ಪತ್ರವನ್ನೇ ಬರೆದಿಲ್ಲ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ನಿರ್ಬಂಧ ಇನ್ನೆರಡು ದಿನ ವಿಸ್ತರಣೆ
ಪೊಲೀಸ್ ಮಹಾ ನಿದೇರ್ಶಕರು ರಾಜ್ಯ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಬೇಕು. ಬಳಿಕ ರಾಜ್ಯ ಗೃಹ ಇಲಾಖೆ ಅಪರ ಮುಖ್ಯಕಾರ್ಯದರ್ಶಿಯವರು ಕೇಂದ್ರಗೃಹ ಇಲಾಖೆಗೆ ಪತ್ರ ಬರೆದ ಬಳಿಕ ರಾಷ್ಟ್ರೀಯ ತನಿಖಾ ದಳಕ್ಕೆ ಪ್ರಕರಣವನ್ನ ವರ್ಗಾಯಿಸಿ ಕೇಂದ್ರ ಗೃಹ ಇಲಾಖೆ ಸೂಚಿಸುತ್ತದೆ. ಆದರೆ ಇಲ್ಲಿ ತನಕ ಆ ಪ್ರಕ್ರಿಯೆಗಳೇ ನಡೆದಿಲ್ಲ ಎನ್ನಲಾಗಿದೆ. ಮೂಲಗಳ ಪ್ರಕರಣ ಇವತ್ತು ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಪತ್ರ ಹೋಗುವ ಸಾಧ್ಯತೆ ಇದೆ.