CrimeDakshina KannadaDistrictsKarnatakaLatestLeading NewsMain Post

ಪ್ರವೀಣ್ ನೆಟ್ಟಾರು ಕೇಸಲ್ಲಿ ಇನ್ನಿಬ್ಬರ ಬಂಧನ- ಪ್ರಕರಣದ ಮಾಸ್ಟರ್ ಮೈಂಡ್ ಬಗ್ಗೆಯೂ ಸುಳಿವು

Advertisements

ಮಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಪ್ರಮುಖ ಆರೋಪಿಗಳ ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹತ್ಯೆ ಮಾಡಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ತಲ್ವಾರ್ ಮತ್ತು ಬೈಕ್ ರಿಕವರಿಗೆ ಹುಡುಕಾಟ ನಡೆಸಲಾಗುತ್ತಿದೆ. ಇನ್ನೂ ನಾಲ್ವರು ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಕೇಸ್ ಟ್ರೇಸ್ ಆಗಿದೆ ಎಂದು ಹಿರಿಯ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಈಗಾಗಲೇ ಬಂಧಿತನಾಗಿರುವ ಶಫೀಕ್ ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ನೌಷನ್ ಬಗ್ಗೆ ಶಫೀಕ್ ಬಾಯಿಬಿಟ್ಟಿದ್ದ. ಬಳಿಕ ಸಿಸಿಟಿವಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಸಹಾಯ ಮಾಡಿದ ಇನ್ನೂ ನಾಲ್ವರು ಆರೋಪಿಗಳು ಸಿಗಬೇಕಿದೆ. ಇದನ್ನೂ ಓದಿ: ಫಾಝಿಲ್ ಹತ್ಯೆ ಪ್ರಕರಣ – ನಾಲ್ವರು ಹಂತಕರು ಅರೆಸ್ಟ್

ನೌಷನ್ ಪ್ರಕರಣದ ಮಾಸ್ಟರ್ ಮೈಂಡ್ ಎಂಬ ಶಂಕೆ ವ್ಯಕ್ತವಾಗಿದ್ದು, ಇಂದು ಮಧ್ಯಾಹ್ನದ ಒಳಗೆ ಪೊಲೀಸರು ಸುದ್ದಿಗೋಷ್ಠಿ ನಡೆಸಿ ಕೇಸ್ ನ ಸಂಪೂರ್ಣ ಮಾಹಿತಿ ಬಹಿರಂಗಪಡಿಸುವ ಸಾಧ್ಯತೆಗಳಿವೆ.

Live Tv

Leave a Reply

Your email address will not be published.

Back to top button