ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯತಾಲೂಕಿನ ಬೆಳ್ಳಾರೆಯಲ್ಲಿ ಬಿ.ಜೆ.ಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಈಗಾಗಲೇ ಮೂರು ತಾಲೂಕುಗಳನ್ನು ಬಂದ್ ಮಾಡಲಾಗಿದೆ. ಅಲ್ಲದೆ 5 ಮಂದಿಗಿಂತ ಹೆಚ್ಚು ಜನ ಒಂದೇ ಕಡೆ ಸೇರಬಾರದಂತೆ ಆದೇಶ ಹೊರಡಿಸಲಾಗಿದೆ. ಜೊತೆಗೆ ನಾಳೆ ಮಧ್ಯರಾತ್ರಿವರೆಗೆ ನಿಷೇಧಾಜ್ಷೆ ಜಾರಿಗೊಳಿಸಲಾಗಿದೆ.
Advertisement
ಕೊಲೆ ಪ್ರಕರಣ ಸಂಬಂಧ ಉದ್ವಿಗ್ನ ಸ್ಥಿತಿ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಪುತ್ತೂರು ಉಪವಿಭಾಗಾಧಿಕಾರಿ ಗಿರೀಶ್ ನಂದನ್ ಹೊರಡಿಸಿದ್ದಾರೆ. ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಿದ್ದಾರೆ. ಘರ್ಷಣೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಇರಲಿದೆ. 5ಕ್ಕಿಂತ ಹೆಚ್ಚು ಜನ ಗುಂಪು ಸೇರದಂತೆ ಆದೇಶದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಮೋದಿ, ಯೋಗಿ ಮಾದರಿಯಲ್ಲಿ ಇವರಿಗೆ ಗಟ್ಸ್ ಇಲ್ಲ: ಪ್ರವೀಣ್ ಹತ್ಯೆಗೆ ಮುತಾಲಿಕ್ ಕಿಡಿ
Advertisement
Advertisement
ಏನಿದು ಪ್ರಕರಣ?
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು(31), ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‍ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದಾರೆ.
Advertisement
ಈಗಾಗಲೇ ಪ್ರವೀಣ್ ಮೃತದೇಹವನ್ನು ಪುತ್ತೂರಿನಿಂದ ಮೆರವಣಿಗೆ ಮೂಲಕ ಅವರ ಸ್ವಗ್ರಹ ಕರೆದೊಯ್ಯಲಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನದ ಬಳಿಕ ಬಿಲ್ಲವ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ. ಇತ್ತ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.