ಮಂಗಳೂರು: ಹತ್ಯೆಯ ದಿನವೇ ಮುಸ್ಲಿಂ ಸ್ನೇಹಿತನೊಬ್ಬನ ಗೃಹ ಪ್ರವೇಶಕಾರ್ಯಕ್ರಮಕ್ಕೆ ಪ್ರವೀಣ್ ಕುಮಾರ್ ನೆಟ್ಟಾರ್ ಹೋಗಿದ್ದರು.
ಹೌದು. ನಿನ್ನೆ ಸ್ನೇಹಿತ ಆರೀಫ್ ಬೆಳ್ಳಾರೆಯ ಗೃಹಪ್ರವೇಶ ಕಾರ್ಯಕ್ರಮವಿತ್ತು. ಹೀಗಾಗಿ ಪ್ರವೀಣ್ ಅವರು ನಿನ್ನೆ ಮಧ್ಯಾಹ್ನ ಕಾರ್ಯದಲ್ಲಿ ಪಾಲ್ಗೊಂಡು ಮುಸ್ಲಿಂ ಸ್ನೇಹತರೊಂದಿಗೆ ಬೆರೆತಿದ್ದರು. ಮುಸ್ಲಿಂ ಮಿತ್ರನ ಭೇಟಿಯನ್ನು ಪ್ರವೀಣ್ ಅವರು ತಮ್ಮ ವಾಸ್ಟಪ್ ಸ್ಟೇಟಸ್‍ನಲ್ಲಿ ಹಾಕಿಕೊಂಡಿದ್ದರು. ಇದೀಗ ಎಲ್ಲರೊಂದಿಗೆ ಒಡನಾಟದಿಂದ ಇದ್ದ ಪ್ರವೀಣ್‍ನನ್ನು ಮತಾಂಧರ ಹತ್ಯೆ ಆಗಿರೋ ಶಂಕೆ ವ್ಯಕ್ತವಾಗುತ್ತಿದೆ.
Advertisement
Advertisement
ಘಟನೆ ಏನು?: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು(31), ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‍ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು. ಇದನ್ನೂ ಓದಿ: ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ರೆ ರಾಜೀನಾಮೆ: ರೇಣುಕಾಚಾರ್ಯ
Advertisement
Advertisement
ಇಂದು ಪ್ರವೀಣ್ ಮೃತದೇಹವನ್ನು ಪುತ್ತೂರಿನಿಂದ ಮೆರವಣಿಗೆ ಮೂಲಕ ಅವರ ಸ್ವಗೃಹ ಕರೆದೊಯ್ಯಲಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನದ ಬಳಿಕ ಬಿಲ್ಲವ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಮಂತ್ರ ಪಠಣದ ಬಳಿಕ ಮನೆ ಸಮೀಪದಲ್ಲೇ ಪ್ರವೀಣ್ ಚಿತೆಗೆ ಮೂವರು ಮಾವಂದಿರಾದ ಶೀನಪ್ಪ ಪೂಜಾರಿ, ಲಿಂಗಪ್ಪ ಪೂಜಾರಿ ಹಾಗೂ ಲೋಕೇಶ್ ಪೂಜಾರಿ ಅಗ್ನಿ ಸ್ಪರ್ಶ ಮಾಡಿದ್ದಾರೆ.
ಬಿಲ್ಲವ ಸಂಪ್ರದಾಯದಂತೆ ಪ್ರವೀಣ್ ನೆಟ್ಟಾರ್ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘಪರಿವಾರದ ಕಾರ್ಯಕರ್ತರು ಅಪಾರ ಸಂಖ್ಯೆ ನೆರೆದಿದ್ದರು. ಇತ್ತ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.