ನವದೆಹಲಿ: ಪ್ರವೀಣ್ ನೆಟ್ಟಾರು ಅವರ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ಕೋರಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.
ನಿನ್ನೆ ಕೆಲ ದುಷ್ಕರ್ಮಿಗಳು ಬಿಜೆಪಿ ಮುಖಂಡ ಪ್ರವೀಣ್ ಅವರನ್ನು ರಾತ್ರಿ ವೇಳೆ ಹತ್ಯೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರೆಲ್ಲರೂ ರಾಜೀನಾಮೆ ನೀಡಿ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪತ್ರ ಬರೆದ ಅವರು ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‍ಐಎ) ವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪತಿಯ ಕಾರ್ಯ ಮುಗಿಯುವುದರೊಳಗೆ ಆರೋಪಿಗಳಿಗೆ ಶಿಕ್ಷೆ ಆಗ್ಬೇಕು: ಪ್ರವೀಣ್ ಪತ್ನಿ ನೂತನಾ
Advertisement
Advertisement
ಘಟನೆ ಏನು?: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‍ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು. ಇದನ್ನೂ ಓದಿ: ಪ್ರವೀಣ್ ಹತ್ಯೆ ಪ್ರಕರಣ – ತನಿಖೆಗೆ 6 ತಂಡ ರಚನೆ, 15 ಜನ ವಶಕ್ಕೆ: ಎಡಿಜಿಪಿ