ಮಂಗಳೂರು: ಬಿಜೆಪಿ (BJP) ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಅರೋಪಿಗಳ ಪತ್ತೆಗೆ ಬಹುಮಾನ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕೊಡಾಜೆಯ ಕೊಡಾಜೆ ಅದ್ದ ಎಂಬವರ ಮಗ ಮೊಹಮ್ಮದ್ ಷರೀಫ್(53)- 5 ಲಕ್ಷ ಹಾಗೂ ನೆಕ್ಕಿಲಾಡಿಯ ಅಗ್ನಾಡಿ ಹೌಸ್ ನ ಅಬೂಬಕರ್ ಮಗ ಮಸೂದ್ ಕೆ.ಎ (40)-5 ಲಕ್ಷ ಒಟ್ಟು 10 ಲಕ್ಷ ಬಹುಮಾನವನ್ನು ಎನ್‍ಐಎ ಘೋಷಿಸಿದೆ.
Advertisement
Advertisement
ಆರೋಪಿಗಳ ಸುಳಿವು ಪತ್ತೆಯಾದರೆ ಬೆಂಗಳೂರಿನ ದೊಮ್ಮಲೂರು ಬಳಿ ಇರುವ ಎನ್‍ಐಎ ಎಸ್‍ಪಿಗೆ ಮಾಹಿತಿ ನೀಡಲು ಮನವಿ ಮಾಡಲಾಗಿದೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ – NIAಯಿಂದ ಮತ್ತೊಬ್ಬ ಆರೋಪಿ ಬಂಧನ
Advertisement
Advertisement
ಹತ್ಯೆ ಪ್ರಕರಣ: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಸುಳ್ಯ (Sullia) ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಜುಲೈ 26ರ ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.
ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಈವರೆಗೂ ಹಲವಾರು ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಉಗ್ರರ ಜೊತೆ ಸಂಪರ್ಕ, ಭಾರತದಲ್ಲಿ ಶಾಂತಿ ಕದಡಲು ಸಂಚು- ಬೆಂಗಳೂರಿನ ಇಬ್ಬರ ವಿರುದ್ಧ NIA ಚಾರ್ಜ್‌ಶೀಟ್ ಸಲ್ಲಿಕೆ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k