ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧನವಾಗಿದೆ.
Advertisement
ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರು ದುಷ್ಕರ್ಮಿಗಳ ಕೈಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದರು. ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಸವಣೂರು ಮೂಲದ ಝಕೀರ್ (29) ಮತ್ತು ಶಫೀಕ್ (27) ಬೆಳ್ಳಾರೆ ಬಂಧಿತ ಆರೋಪಿಗಳು. ಝಾಕೀರ್ ಸವಣೂರು ಎಸ್‌ಡಿಪಿಐ ಗ್ರಾಮ ಸಮಿತಿ ಮುಖಂಡನಾಗಿದ್ದು, ಶಫೀಕ್ ಎಸ್‌ಡಿಪಿಐ ಪಕ್ಷದ ಸಕ್ರೀಯ ಕಾರ್ಯಕರ್ತ. ಬೆಳ್ಳಾರೆ, ಸುಳ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದ. ಇದನ್ನೂ ಓದಿ: ಸರ್ಕಾರಕ್ಕೆ ಜನೋತ್ಸವದ ಬದಲು ಜನಾಕ್ರೋಶದ ದರ್ಶನವಾಗಿದೆ – ಕಾರ್ಯಕ್ರಮ ರದ್ದುಗೊಳಿಸಿದ್ದು ಮೃತನ ಮೇಲಿನ ಗೌರವದಿಂದಲ್ಲ: ಕಾಂಗ್ರೆಸ್
Advertisement
Advertisement
ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಸವಣೂರು ಮೂಲದ ಝಕೀರ್ ಮತ್ತು ಶಫೀಕ್ ಬೆಳ್ಳಾರೆಯನ್ನು ಬಂಧಿಸಲಾಗಿದೆ. ಪ್ರಕರಣದ ಬಗ್ಗೆ ಇನ್ನಷ್ಟು ತನಿಖೆ ನಡೆಸಬೇಕಾಗಿದೆ. ಆರೋಪಿಗಳನ್ನು ಇಂದೇ ನ್ಯಾಯಾಲಯಕ್ಕೆ ಹಾಜರು ಮಾಡುತ್ತೇವೆ ಎಂದು ದಕ್ಷಿಣಕನ್ನಡ ಎಸ್‍ಪಿ ಹೃಷಿಕೇಶ್ ಸೋನಾವಣೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ತಂದೆ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು
Advertisement
ಏನಿದು ಘಟನೆ:
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.