ನವದೆಹಲಿ: ಗೃಹ ಸಚಿವ ಆರಗ ಜ್ಞಾನೇಂದ್ರ ಜನರ ಕಣ್ಣೀರು ಒರೆಸುವ ಕೆಲಸ ಮಾಡಬೇಕಿತ್ತು ಆದರೆ ಅವರೇ ಮಾಧ್ಯಮಗಳ ಮುಂದೆ ಕಣ್ಣೀರು ಹಾಕುತ್ತಿದ್ದಾರೆ. ರಾಜ್ಯದ ಗೃಹ ಮಂತ್ರಿ ಕಣ್ಣೀರು ಹಾಕುತ್ತಿರುವುದು ಇದೇ ಮೊದಲು, ಇವರಿಗೆ ಕಾನೂನು ವ್ಯವಸ್ಥೆ ಕಾಪಾಡಲು ಸಾಧ್ಯವಾಗುತ್ತಿಲ್ಲ ಹೀಗಾಗಿ ಆರಗ ಜ್ಞಾನೇಂದ್ರ ಅವರು ರಾಜೀನಾಮೆ ನೀಡಿ ಹೊರಡಲಿ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಮಾತನಾಡಿದ ಅವರು, ಗೃಹ ಸಚಿವರು ಬರಿ ಬಾಯಿ ಮಾತಿಗೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎನ್ನುತ್ತಾರೆ. ಆದರೆ ಈವರೆಗೂ ಯಾವುದೇ ಕ್ರಮಗಳು ಆಗಿಲ್ಲ. ಹತ್ಯೆ ಮಾಡಿದರವರು ಯಾರೇ ಆಗಿದ್ದರು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮನೆಯ ಸದಸ್ಯನನ್ನ ಕಳೆದುಕೊಂಡಿದ್ದೇವೆ- ಪ್ರವೀಣ್ ಬಗ್ಗೆ ಮಾತನಾಡುತ್ತಾ ಗದ್ಗದಿತರಾದ ಆರಗ
Advertisement
Advertisement
ಸಂಸದ ತೇಜಸ್ವಿ ಸೂರ್ಯ ಪ್ರತಿಯೊಬ್ಬರಿಗೆ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಬೇಜವ್ದಾರಿ ಹೇಳಿಕೆ ನೀಡಿದ್ದಾರೆ. ಅವರಿಗೆ ಗೊತ್ತಿಲ್ಲ ಜನರ ತಲೆ ಕಾಯುವ ಕೆಲಸ ಸರ್ಕಾರದ್ದು ಅಂತಾ. ಜನರ ಕಾಯದ ಈ ಸರ್ಕಾರದ ಸಾಧನೆ ಏನು? ಇಡೀ ರಾಜ್ಯದಲ್ಲಿ ಗಲಾಟೆ ಎಬ್ಬಿಸಿ, ಶಾಂತಿ ಕದಡಿದ್ರಿ, ವಿದ್ಯಾರ್ಥಿಗಳ ಮನಸ್ಸು ಕೆಡಿಸಿದ್ರಿ, ನಿಮ್ಮ ಪಕ್ಷದ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡ, ಇದೇ ನಿಮ್ಮ ಸರ್ಕಾರದ ಸಾಧನೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ನೀವು ಊರಿಗೆ ಹಿರಿಯರು, ಕೋಳಿ ಅಂಗಡಿ ಉದ್ಘಾಟನೆಗೆ ತಂದೆಯನ್ನು ಆಹ್ವಾನಿಸಿದ್ದರು: ಪ್ರವೀಣ್ ಬಗ್ಗೆ ಆರೀಫ್ ಮಾತು
Advertisement
ಬಿಜೆಪಿ ಹಿಂದುಗಳು, ಹಿಂದುತ್ವ ಬಳಸಿಕೊಳ್ಳುತ್ತದೆ. ನಾವು ಅಧಿಕಾರಕ್ಕೆ ಬಂದರೆ ಕಾನೂನು ಸುವ್ಯವಸ್ಥೆ ಕಾಪಾಡುತ್ತೇವೆ ಎಂದಿದ್ದರು. ಆದರೆ ಸರ್ಕಾರ ಏನು ಮಾಡುತ್ತಿದೆ, ಈಗ ನೋಡಿದರೆ ಗೃಹ ಸಚಿವರು ಕ್ಯಾಮೆರಾ ಮುಂದೆ ಕಣ್ಣೀರಿಡುತ್ತಿದ್ದಾರೆ. ಇದನ್ನೆಲ್ಲ ಬಿಟ್ಟು ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಇಲ್ಲ ರಾಜೀನಾಮೆ ನೀಡಿ ಹೋಗಬೇಕು ಎಂದು ಸ್ಪಷ್ಟಪಡಿಸಿದ್ದಾರೆ.