ಮಂಗಳೂರು/ ಮಡಿಕೇರಿ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿರುವ ನಿಷೇಧಿತ ಪಿಎಫ್ಐ (PFI) ಸಂಘಟನೆ ಕಾರ್ಯಕರ್ತರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (NIA) ಇಂದು ದಾಳಿ ನಡೆಸಿದೆ.
Advertisement
ಇಂದು ಬೆಳಗ್ಗೆ ಏಕಕಾಲಕ್ಕೆ 6 ಕಡೆಗಳಲ್ಲಿ ದಾಳಿ ನಡೆಸಿರುವ ಎನ್‌ಐಎ ಅಧಿಕಾರಿಗಳು, ಎಲೆಕ್ಟ್ರಾನಿಕ್ ಡಿವೈಸ್ಗಳು ಸೇರಿದಂತೆ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.
Advertisement
Advertisement
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕನ್ವೆಂಟ್ ಬಾಣೆ ಹಾಗೂ ಕಲ್ಕಂದೂರು ಗ್ರಾಮಕ್ಕೆ ಆಗಮಿಸಿ ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಬಾಣೆಯ ಅಬ್ದುಲ್ ನಾಸೀರ್ ಕಲ್ಕಂದೂರು ನಿವಾಸಿ ಅಬ್ದುಲ್ ರೆಹಮಾನ್ ಮನೆಗೆ ಅಧಿಕಾರಿಗಳು ಆಗಮಿಸಿದ್ದಾರೆ. ಈ ವೇಳೆ ಅಬ್ದುಲ್ ನಜೀರ್, ಅಬ್ದುಲ್ ರೆಹಮಾನ್ ಇಬ್ಬರು ದುಬೈನಲ್ಲಿರುವ ಬಗ್ಗೆ ಎನ್‌ಐಎ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: Expressway- ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ರೆ ಡಿಎಲ್ ರದ್ದು: ಅಲೋಕ್ ಕುಮಾರ್
Advertisement
ಮುಸ್ತಫಾ ಪೈಚಾರ್, ಅಬುಬಕ್ಕರ್ ಸಿದ್ದಿಕ್, ಉಮ್ಮರ್ ಫಾರುಕ್, ತುಫೇಲ್, ಮಸೂದ್ ಅಗ್ನಾಡಿ ಸೇರಿದಂತೆ ಇನ್ನಿತರ ಪ್ರಮುಖ ಆರೋಪಿಗಳಿಗಾಗಿ ಎನ್‌ಐಎ ತಲಾಶ್ ಮಾಡುತ್ತಿದೆ.
ಏನಿದು ಪ್ರಕರಣ?
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ಅವರು ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.
ತಕ್ಷಣ ಪುತ್ತೂರು ಆಸ್ಪತ್ರೆಗೆ ಪ್ರವೀಣ್ ಅವರನ್ನು ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದ ಕಾರಣ ಚಿಕಿತ್ಸೆ ಫಲಕರಿಯಾಗದೇ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಈವರೆಗೆ ಹಲವಾರು ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಅಂದಿನ ಬಿಜೆಪಿ ಸರ್ಕಾರ ಎನ್ಐಎಗೆ ವಹಿಸಿತ್ತು.