ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಎನ್‌ಐಎ (NIA) ಬಂಧಿಸಿದೆ.
ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಶಾಹಿದ್ (40) ಬಂಧಿತ ಆರೋಪಿ. ಈ ಸಂಬಂಧ NIA ಅಧಿಕಾರಿಗಳು ಅಧಿಕೃತ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 150 ವರ್ಷಗಳ ಬಳಿಕ ಧಾರವಾಡಕ್ಕೆ ಭೇಟಿ ನೀಡಿದ ಕನ್ನಡ ನಿಘಂಟು ತಜ್ಞ ಕಿಟೆಲ್ ಕುಟುಂಬ
Advertisement
Advertisement
SDPI ಮುಖಂಡರಾದ ಶಾಫಿ ಬೆಳ್ಳಾರೆ ಮತ್ತು ಇಕ್ಬಾಲ್ ಬೆಳ್ಳಾರೆಯ ತಂಗಿ ಗಂಡ ಶಾಹಿದ್‌ನನ್ನು ಬಂಧಿಸಲಾಗಿದೆ. ಆರೋಪಿಯನ್ನು ಬಂಧಿಸಿ ಎನ್‌ಐಎ ತಂಡ ಬೆಂಗಳೂರಿಗೆ ಕರೆತಂದಿದೆ.
Advertisement
Advertisement
ರಾಜ್ಯ ಬಿಜೆಪಿ ಯುವ ಮೋರ್ಚಾ ಸದಸ್ಯರಾಗಿದ್ದ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಯಾಗಿತ್ತು. ಹತ್ಯೆಗೆ ರಾಜ್ಯಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿತ್ತು. ಪ್ರಕರಣದ ಗಂಭೀರತೆ ಅರಿತ ಸರ್ಕಾರ ಕೇಸ್‌ನ್ನು ಎನ್‌ಐಎ ತನಿಖೆಗೆ ವಹಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಹಲವು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಅಪ್ರಾಪ್ತ ಬಾಲಕಿ ರೇಪ್‌ಕೇಸ್ – ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 1 ಲಕ್ಷ ಬಹುಮಾನ