ಬೆಂಗಳೂರು: ಬೆಳ್ಳಾರೆಯ ಪ್ರವೀಣ್ ಕೊಲೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಹಂತಕರ ಪತ್ತೆಗೆ ಐದು ತಂಡ ರಚನೆ ಮಾಡಲಾಗಿದ್ದು, ಕೇರಳಕ್ಕೂ ಹೋಗಿ ಕಾರ್ಯಾಚರಣೆ ಮಾಡಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜಿ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಎಲ್ಲರೂ ಸಂಯಮದಿಂದ ವರ್ತಿಸಬೇಕು ಅಂತ ಮನವಿ ಮಾಡಿಕೊಳ್ಳುತ್ತೇನೆ. ಸಂಘಟಿತ ಅಪರಾಧಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಇದನ್ನೂ ಓದಿ: ಮನೆಯ ಸದಸ್ಯರ ಜೊತೆ ಸಂಘದ ಪ್ರಾರ್ಥನೆ ಮಾಡುತ್ತಿದ್ದ ಪ್ರವೀಣ್
Advertisement
Advertisement
ಈ ಸಂದರ್ಭದಲ್ಲಿ ಮಾಧ್ಯಮಗಳು ಯೋಗಿ ಮಾದರಿಯಲ್ಲಿ ಮತಾಂಧರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಾ ಎಂಬ ಪ್ರಶ್ನೆಗೆ, ಉತ್ತರ ಪ್ರದೇಶ ಪರಿಸ್ಥಿತಿ ಬೇರೆ ಕರ್ನಾಟಕ ಪರಿಸ್ಥಿತಿ ಬೇರೆ. ನಾವು ಕೇವಲ ಮಾತನಾಡುವುದಿಲ್ಲ. ಕ್ರಮ ಜರುಗಿಸಿ ತೋರಿಸುತ್ತೇವೆ. ಯುಪಿಗೆ ಯೋಗಿ ಸೂಕ್ತ ಸಿಎಂ. ಕರ್ನಾಟಕದಲ್ಲಿ ಎಲ್ಲವನ್ನೂ ಪ್ರಯೋಗ ಮಾಡುತ್ತಿದ್ದು, ಪ್ರಸಂಗ ಬಂದರೆ ರಾಜ್ಯದಲ್ಲೂ ಯೋಗಿ ಮಾಡೆಲ್ ಜಾರಿ ಮಾಡುತ್ತೇವೆ ಎಂದು ಸಿಎಂ ಹೇಳಿದರು.
Advertisement
ಕೆಲವು ಶಕ್ತಿಗಳು ಅಹಿತಕರ ಘಟನೆ ಸೃಷ್ಟಿ ಮಾಡಲು ಕಾಯುತ್ತಿರುತ್ತವೆ. ಉದಾಹರಣೆಗೆ ಹಿಜಬ್ ಸಮಸ್ಯೆ ಸೃಷ್ಟಿಸಿದರು. ಹಿಜಬ್ ಸಮಸ್ಯೆಯನ್ನು ನಿಯಂತ್ರಣ ಮಾಡಿದ್ದೇವೆ. ಕೋರ್ಟ್ ಕೂಡಾ ಆದೇಶ ನೀಡಿದೆ. ಆಜಾನ್ ವಿಚಾರದಲ್ಲೂ ಸುಪ್ರೀಂಕೋರ್ಟ್ ಆದೇಶಗಳ ಪಾಲನೆ ಮೂಲಕ ನಿಯಂತ್ರಣ ಮಾಡಲಾಗಿದೆ. ಇಂಥವನ್ನೂ ನಿಭಾಯಿಸಿ ರಾಜ್ಯದ ಅಭಿವೃದ್ಧಿಯತ್ತಲೂ ಗಮನ ಕೊಟ್ಟಿದ್ದೇವೆ ಎಂದರು.
Advertisement
ಪಿಎಫ್‌ಐನಂತಹ ಸಂಘಟನೆಗಳು ಬ್ಯಾನ್ ಆಗುತ್ತಾ ಎಂಬ ಪ್ರಶ್ನೆಗೆ, ರಾಜ್ಯ ಸರ್ಕಾರಗಳು ಈ ಸಂಘಟನೆಗಳನ್ನು ಬ್ಯಾನ್ ಮಾಡುವ ಪ್ರಯತ್ನ ಮಾಡಿವೆ. ಆದರೆ ಕೋರ್ಟಿನಲ್ಲಿ ಹಿನ್ನಡೆಯಾಗಿದೆ. ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಬೇಕು. ಆದಷ್ಟು ಬೇಗ ಕೇಂದ್ರದಿಂದ ಆ ನಿರ್ಧಾರ ಪ್ರಕಟವಾಗುವ ನಿರೀಕ್ಷೆ ಇದೆ ಎಂದರು.
ಕಡತಗಳ ವಿಲೇವಾರಿ ವಿಳಂಬ ಆರೋಪ ಸುಳ್ಳು. ಅಭಿವೃದ್ಧಿ ಕುರಿತ ಎಲ್ಲ ಫೈಲ್ ಗಳೂ ವಿಲೇವಾರಿ ಆಗಿವೆ. ವರ್ಗಾವಣೆ ಕುರಿತ ಫೈಲ್‌ಗಳ ವಿಲೇವಾರಿ ಬಾಕಿಯಿದೆ ಎಂದು ತಿಳಿಸಿದರು.