ಮಂಗಳೂರು: ಬಿಜೆಪಿ ಕಾರ್ಯಕರ್ತ (BJP Worker) ಬೆಳ್ಳಾರೆಯ ಪ್ರವೀಣ್ ನೆಟ್ಟಾರು (Praveen Nettaru) ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ಪ್ರಮುಖ ಆರೋಪಿಗಳ ಪತ್ತೆಗೆ ಮಾಹಿತಿ ನೀಡಿದವರಿಗೆ ಒಟ್ಟು 14 ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.
Advertisement
ಈ ಕುರಿತು ಎನ್‌ಐಎ (NIA) ಅಧಿಕೃತ ಪ್ರಕಟಣೆ ಹೊರಡಿಸಿದೆ. ಆರೋಪಿಗಳಾದ ಮೊಹಮ್ಮದ್ ಮುಸ್ತಫಾಗೆ ಹಾಗೂ ತುಫೈಲ್‌ಗೆ ತಲಾ 5 ಲಕ್ಷ ಹಾಗೂ ಉಮರ್ ಫಾರೂಕ್ ಮತ್ತು ಅಬೂಬಕ್ಕರ್ ಸಿದ್ದಿಕ್ ಗೆ ತಲಾ 2 ರೂ. ಬಹುಮಾನ ಘೋಷಿಸಿದೆ. ಇದನ್ನೂ ಓದಿ: ವಾರದ ಹಿಂದೆಯೇ ಪ್ರವೀಣ್ ಹತ್ಯೆಗೆ ಸ್ಕೆಚ್ – ಕೇರಳದ 7 ಕಡೆ ಆಶ್ರಯ, ಹಂತಕರು ಕೊನೆಗೂ ಅಂದರ್
Advertisement
Advertisement
ಏನಿದು ಘಟನೆ?
ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ 31 ವರ್ಷದ ಪ್ರವೀಣ್ ಕುಮಾರ್ ನೆಟ್ಟಾರು ಅವರನ್ನು ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.
Advertisement
ಪ್ರವೀಣ್ ನೆಟ್ಟಾರು ಹತ್ಯೆಯಿಂದ (Murder) ದಕ್ಷಿಣ ಕನ್ನಡದಲ್ಲೂ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲೂ ಪ್ರತಿಭಟನೆ ನಡೆದಿತ್ತು. ತನಿಖೆಯಲ್ಲಿ ಸರ್ಕಾರ ವಿಫಲವಾಗಿದೆ. ಕಾರ್ಯಕರ್ತರ ಹಿತ ಕಾಯಲು ಪಕ್ಷ ವಿಫಲವಾಗಿದೆ ಎಂದು ಆರೋಪಿಸಿ ಹಲವಾರು ಬಿಜೆಪಿ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದರು. ಇದರಿಂದಾಗಿ ಪಕ್ಷ ಹಾಗೂ ಸರ್ಕಾರವು (Government Of Karnataka) ಮುಜುಗರ ಅನುಭವಿಸಬೇಕಾದ ಪರಿಸ್ಥಿತಿಯೂ ಉಂಟಾಗಿತ್ತು. ಇದನ್ನೂ ಓದಿ: ಉದ್ಯೋಗಾಕಾಂಕ್ಷಿ ಮೇಲೆ DYSP ದರ್ಪ – ಕೆನ್ನೆಗೆ ಬಾರಿಸಿದ ಪೊಲೀಸ್ ಅಧಿಕಾರಿ
ಬಳಿಕ ರಾಜ್ಯ ಸರ್ಕಾರ ಎನ್‌ಐಎ ಹೆಗಲಿಗೆ ತನಿಖೆ ಜವಾಬ್ದಾರಿಯನ್ನು ವಹಿಸಿತ್ತು. ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದ ಎನ್‌ಐಎ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಸುಳ್ಯದ 32 ಕಡೆಗಳಲ್ಲಿ ದಾಳಿ ನಡೆಸಿತ್ತು. ಕೇರಳದ 7 ಕಡೆ ಆಶ್ರಯ, ಹಂತಕರು ಸೇರಿದಂತೆ 10ಕ್ಕೂ ಹೆಚ್ಚು ಮಂದಿಯನ್ನು ಮಂದಿಯನ್ನು ಎನ್‌ಐಎ ಬಂಧಿಸಿದೆ. ಇದೀಗ ಕೊಲೆ ಮಾಡಿರುವ ಪ್ರಮುಖ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದು, ಆರೋಪಿಗಳ ಪತ್ತೆಗೆ ಮಾಹಿತಿ ನೀಡಿದವರೆ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.