ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಸುಳ್ಯದ 32 ಕಡೆಗಳಲ್ಲಿ ಎನ್ಐಎ ದಾಳಿ ನಡೆಸಿದೆ.
ಎರಡು ತಿಂಗಳ ಹಿಂದೆ ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆ ತನಿಖೆಯನ್ನು ಎನ್‌ಐಎ ತಂಡ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಕೆಲವು ಮಾಹಿತಿಯನ್ನಾಧರಿಸಿ 32 ಕಡೆ ಮನೆ ಹಾಗೂ ಕೆಲ ಖಾಸಗಿ ಕಟ್ಟಡಗಳ ಮೇಲೆ ಎನ್ಐಎ ದಾಳಿ ನಡೆಸಿದೆ. ಘಟನೆಗೆ ಸಂಬಂಧಿಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆಗೆ ಒಳಪಡಿಸಿದೆ. ಎನ್ಐಎ ಅಧಿಕಾರಿಗಳ ತಂಡಕ್ಕೆ ರಾಜ್ಯ ಪೊಲೀಸರು ಸಾಥ್ ನೀಡಿದ್ದಾರೆ.
Advertisement
Advertisement
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು. ಇದನ್ನೂ ಓದಿ: ವಾರದ ಹಿಂದೆಯೇ ಪ್ರವೀಣ್ ಹತ್ಯೆಗೆ ಸ್ಕೆಚ್ – ಕೇರಳದ 7 ಕಡೆ ಆಶ್ರಯ, ಹಂತಕರು ಕೊನೆಗೂ ಅಂದರ್
Advertisement
Advertisement
ಪ್ರವೀಣ್ ನೆಟ್ಟಾರು ಹತ್ಯೆಯಿಂದ ದಕ್ಷಿಣ ಕನ್ನಡದಲ್ಲೂ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲೂ ಕ್ಷೋಭೆ ಭುಗಿಲೆದ್ದಿತ್ತು, ತನಿಖೆಯಲ್ಲಿ ಸರ್ಕಾರ ವಿಫಲವಾಗಿದೆ. ಕಾರ್ಯಕರ್ತರ ಹಿತ ಕಾಯಲು ಪಕ್ಷ ವಿಫಲವಾಗಿದೆ ಎಂದು ಆರೋಪಿಸಿ ಹಲವಾರು ಬಿಜೆಪಿ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದರು. ಇದರಿಂದಾಗಿ ಪಕ್ಷ ಹಾಗೂ ಸರ್ಕಾರವು ಮುಜುಗರ ಅನುಭವಿಸಬೇಕಾದ ಪರಿಸ್ಥಿತಿಯೂ ಉಂಟಾಯಿತು. ಇದನ್ನೂ ಓದಿ: ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ – ಪ್ರಮುಖ ಮೂವರು ಆರೋಪಿಗಳ ಬಂಧನ