ಬೆಂಗಳೂರು: ಕನ್ನಡ ಧ್ವಜಕ್ಕೆ, ನಾಡು-ನುಡಿಯನ್ನು ಅವಮಾನಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಡಿ.31 ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದವು. ಆದರೆ ಬಂದ್‌ನ ದಿನಾಂಕವನ್ನು ಮುಂದೂಡಲು ಕನ್ನಡ ಪರ ಸಂಘಟನೆಗಳ ಅಧ್ಯಕ್ಷ ವಾಟಳ್ ನಾಗರಾಜ್‌ಗೆ ಕರ್ನಾಟಕ ರಕ್ಷಣ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಮನವಿ ಪತ್ರ ಸಲ್ಲಿಸಿದ್ದಾರೆ.
ಪತ್ರದಲ್ಲಿ ಏನಿದೆ?: ಕನ್ನಡದ, ಕನ್ನಡಿಗರ, ಕನ್ನಡಪರ ಹೋರಾಟಗಾರರ ಪ್ರಶ್ನಾತೀತ ನಾಯಕರೇ, ತಮ್ಮಲ್ಲಿ ವಿನಮ್ರತೆಯಿಂದ ನಿವೇದಿಸಿಕೊಳ್ಳುವುದೇನೆಂದರೆ ಡಿ.22 ರಂದು ನಾವೆಲ್ಲರೂ ಒಮ್ಮತದಿಂದ ದಿನಾಂಕ 31ರ ಶುಕ್ರವಾರ ರಾಜ್ಯ ಬಂದ್‌ಗೆ ಕರೆ ನೀಡಿದ್ದೆವು. ಆದರೆ ನಂತರ ನಡೆದ ಹಲವಾರು ಬೆಳವಣಿಗೆಗಳಿಂದ ನಮ್ಮ ಈ ನಿರ್ಧಾರ ಪ್ರಸ್ತುತ ಸರಿ ಇಲ್ಲವೆಂಬ ಭಾವನೆ ಮೂಡುತ್ತಿದೆ.
Advertisement
Advertisement
ಕಾರಣ ಓಮಿಕ್ರಾನ್ ಈಗಾಗಲೇ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿದೆ. ತತ್ಪರಿಣಾಮವಾಗಿ ಸೆಕ್ಷನ್ 144 ಹಾಗೂ ರಾತ್ರಿ ಕರ್ಫ್ಯೂ ಕೂಡ ಜಾರಿ ಮಾಡಲಾಗಿದೆ. ಈಗಾಗಲೇ ಕೋವಿಡ್ ಕಾರಣದಿಂದ ಸಾಕಷ್ಟು ಸಂಕಷ್ಟದಲ್ಲಿರುವ ವರ್ತಕರು ವಾಣಿಜ್ಯೋದ್ಯಮಿಗಳು ಹೋಟೆಲ್ ಮಾಲೀಕರು ನಮ್ಮ ಈ ನಿರ್ಧಾರದಿಂದ ಸಾಕಷ್ಟು ಆತಂಕದಲ್ಲಿದ್ದಾರೆ. ಹಿಂದಿನ ವರ್ಷದ ಕೊನೆಯಲ್ಲಿ ಹೊಸ ವರ್ಷದ ಆರಂಭದಲ್ಲಿ ಒಳ್ಳೆಯ ವ್ಯಾಪಾರ ವಹಿವಾಟಿನ ನಿರೀಕ್ಷೆಯಲ್ಲಿದ್ದ, ವ್ಯಾಪಾರಸ್ಥರು ಬಹಳ ನಷ್ಟವನ್ನು ಅನುಭವಿಸಿದ್ದಾರೆ.
Advertisement
Advertisement
ಸದಾಕಾಲ ನಮ್ಮ ಜೊತೆ ನಿಲ್ಲುತ್ತಿದ್ದ ಚಿತ್ರೋದ್ಯಮ ಕೆಲವು ಸಂಘಟನೆಗಳು ತಮ್ಮ ಅಸಮಾಧಾನವನ್ನು ಹೊರ ಹಾಕಿವೆ. ಸಾರ್ವಜನಿಕ ವಲಯ ಹಾಗೂ ಬಹಳ ಪ್ರಮುಖವಾಗಿ ಬೆಳಗಾವಿಯ ಕ್ರಿಯ ಸಮಿತಿ ಕೂಡ ನಮ್ಮ ಬಂದ್‌ಗೆ ಬೆಂಬಲ ನೀಡುತ್ತಿಲ್ಲ. ನಮ್ಮ ಸಂಘಟನೆಯ ಪದಾಧಿಕಾರಿಗಳಲ್ಲೂ ಬಂದ್ ಬಗ್ಗೆ ಒಮ್ಮತ ಸಾಧ್ಯವಾಗಿಲ್ಲ. ಇದನ್ನೂ ಓದಿ: ಕರ್ನಾಟಕ ಬಂದ್‍ಗೆ ಎರಡೇ ದಿನ ಬಾಕಿ – ಹಲವು ವಲಯಗಳಿಂದ ಇನ್ನು ಸಿಕ್ಕಿಲ್ಲ ಪರಿಪೂರ್ಣ ಬೆಂಬಲ
ಈ ಎಲ್ಲಾ ಕಾರಣಗಳನ್ನು ಗಮನಿಸಿ ಸಾರ್ವಜನಿಕರ ಹಿತದೃಷ್ಟಿಯಿಂದ ನಾವು ಬಂದ್ ದಿನಾಂಕವನ್ನು ಮೂಂದೂಡುವುದು ಸೂಕ್ತ. ಮುಂದಿನ ಸಭೆಯಲ್ಲಿ ಚರ್ಚಿಸಿ ದಿನಾಂಕ ನಿಗದಿಗೊಳಿಸೋಣ ಎಂದು ತಮ್ಮಲ್ಲಿ ಕಳಕಳಿಯಿಂದ ಪ್ರಾರ್ಥಿಸುತ್ತೇವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಪಂಜಾಬ್ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ ಮಾಜಿ ಕ್ರಿಕೆಟಿಗ ದಿನೇಶ್ ಮೊಂಗಿಯಾ