ಬೆಂಗಳೂರು: ಪಿಎಸ್‍ಐ ಪರೀಕ್ಷೆಯಲ್ಲಿ ಅಕ್ರಮ ಕಂಡು ಬಂದಿಲ್ಲ. ಪರೀಕ್ಷಾ ಕೇಂದ್ರಗಳಲ್ಲಿ ಉತ್ತರ ಪ್ರತಿಗಳು ಮ್ಯಾನಿಪ್ಲೇಟ್ ಮಾಡಿರುವ ಅನುಮಾನದ ಮೇರೆಗೆ ಎಫ್‍ಐಆರ್ ದಾಖಲಿಸಿಕೊಂಡು ಪ್ರಕರಣದ ಬಗ್ಗೆ ತನಿಖೆ ಮಾಡಲು ಸಿಐಡಿಗೆ ಕೊಡಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು.
ಬೆಂಗಳೂರಿನ ಕೋರಮಂಗಲ ಕೆ.ಎಸ್ ಆರ್ ತುಕಡಿ ಮೈದಾನದಲ್ಲಿ ಕಾವಯತು ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಐಡಿ ಅಧಿಕಾರಿಗಳು ಈಗಾಗಲೇ ಪ್ರಕರಣದ ಬಗ್ಗೆ ತನಿಖೆ ಪ್ರಾರಂಭ ಮಾಡಿದ್ದು, ಕೆಲವರನ್ನು ಬಂಧಿಸಿದ್ದಾರೆ. ಸರ್ಕಾರ 545 ಪಿಎಸ್‍ಐಗಳ ನೇಮಕಾತಿ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶದಂತೆ ಪರೀಕ್ಷೆ ಮಾಡಲಾಗಿದೆ. ಪರೀಕ್ಷೆಯಲ್ಲಿ ಅಕ್ರಮ ನಡೆದಿಲ್ಲ ಎಂದರು.
Advertisement
Advertisement
ಪರೀಕ್ಷಾ ಕೇಂದ್ರಗಳಲ್ಲಿ ಉತ್ತರದ ಪ್ರತಿಗಳು ಮ್ಯಾನಿಪ್ಲೇಟ್ ಆಗಿರೋದು ಕಂಡು ಬಂದಿದೆ. ಹಾಗಾಗಿ ಸಿಐಡಿ ಅಧಿಕಾರಿಗಳು ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆ ಆಗಿರುವ ಅಭ್ಯರ್ಥಿಗಳ ತನಿಖೆ ಮಾಡುತ್ತಿದ್ದಾರೆ. ನೂರು ಮಂದಿ ಅಭ್ಯರ್ಥಿಗಳನ್ನು ತನಿಖೆ ಮಾಡಿ ಮಾಹಿತಿ ಪಡೆದುಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಪ್ರಧಾನಿ ಭೇಟಿಗೂ ಮುನ್ನ ಜಮ್ಮುವಿನಲ್ಲಿ ಎನ್‌ಕೌಂಟರ್ – ಇಬ್ಬರು ಉಗ್ರರ ಹತ್ಯೆ
Advertisement
ಉತ್ತರ ಪತ್ರಿಕೆ ಮ್ಯಾನಿಪ್ಲೇಟ್ ಮಾಡಿರುವ ಪರೀಕ್ಷಾ ಕೇಂದ್ರಗಳ ವಿರುದ್ಧ ಕ್ರಮಕೈಗೊಳ್ಳಲಾಗುತ್ತಿದೆ. ಅದರಲ್ಲಿ ಭಾಗಿಯಾಗಿರುವ ಪರೀಕ್ಷಾ ಕೇಂದ್ರದ ಸಿಬ್ಬಂದಿಯನ್ನು ಬಂಧಿಸಿ ತನಿಖೆ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೇ ಪ್ರಕರಣ ಹಿಂದೆ ಯಾರಿದ್ದಾರೆ ಎನ್ನವುದರ ಕುರಿತು ತನಿಖೆ ನಡೆಸಲಾಗುತ್ತಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ಕಠಿಣವಾದ ಕ್ರಮಕೈಗೊಳ್ಳಲಾಗುತ್ತದೆ. ಜೊತೆಗೆ ಮುಂದೆ ಯಾವುದೇ ಪರೀಕ್ಷೆಗಳಲ್ಲಿ ಭಾಗಿಯಾಗಲು ಸಾದ್ಯವಾಗದ ಹಾಗೇ ಮಾಡಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಪರೀಕ್ಷಾ ಕೇಂದ್ರದಲ್ಲೂ ಹಿಜಬ್ ವಿದ್ಯಾರ್ಥಿನಿಯರ ಹೈಡ್ರಾಮಾ – ಮನೆಗೆ ನಡೆದ ವಿದ್ಯಾರ್ಥಿನಿಯರು