ಡಬಲ್ ಎಂಜಿನ್ ಸರ್ಕಾರ ಡಬಲ್ ಗೇಮ್’ ಆಡುತ್ತಿದೆ
ಬೆಂಗಳೂರು: ಸಮರ್ಥ ಅಧಿಕಾರಿಗಳನ್ನು ನಂಬದೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಎನ್‍ಐಎಗೆ ವಹಿಸುವ ನಾಟಕವಾಡಿ ಕಗ್ಗೊಲೆಗಳ ತನಿಖೆಗೆ ‘ಸಮಾಧಿ’ ಕಟ್ಟಲು ಹೊರಟಿದೆ. ಎರಡು ಕೊಲೆಗಳು ನಡೆದ ಬೆಳ್ಳಾರೆ ಗ್ರಾಮದಲ್ಲಾದರೂ ಬೊಮ್ಮಾಯಿ ಅವರು ಮುಖ್ಯಮಂತ್ರಿ ಹೊಣೆಯ ಘನತೆಗೆ ತಕ್ಕಂತೆ ಶಾಂತಿ ರಕ್ಷಣೆ ಬಗ್ಗೆ ಒಂದು ಮಾತನ್ನಾದರೂ ಹೇಳಿದಿರಾ? ಇಲ್ಲ, ಚುನಾವಣೆ ವರ್ಷವಲ್ಲ. ಕೊಲೆಗಳೇ ಹೆಚ್ಚೆಚ್ಚು ಆಗಬೇಕು, ಅವರ ಮತಪೆಟ್ಟಿಗೆ ಕೊಬ್ಬಬೇಕು. ನೆತ್ತರಧಾರೆ ಹರಿದಷ್ಟೂ ಭರ್ಜರಿ ಮತಧಾರೆ ಎಂದು ಸರಣಿ ಟ್ವೀಟ್ ಮೂಲಕ ಬಿಜೆಪಿ ಸರ್ಕಾರವನ್ನು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.
Advertisement
ಟ್ವೀಟ್‍ನಲ್ಲಿ ಏನಿದೆ:
ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಕೊಳ್ಳಲಾಗದ ಅಸಮರ್ಥ, ಅಸಹಾಯಕ ಬಿಜೆಪಿ ಸರ್ಕಾರ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಎನ್‍ಐಎ ತನಿಖೆಗೆ ಒಪ್ಪಿಸಿದೆ. ಆದರೆ, ಕರಾವಳಿಯಲ್ಲಿ ನಡೆದ ಎಲ್ಲ ಹತ್ಯೆಗಳನ್ನೂ ಎನ್‍ಐಎ ತನಿಖೆಗೆ ವಹಿಸಲು ಹಿಂಜರಿಯುತ್ತಿದೆ! ಏಕೆ? ಕರಾವಳಿ ಭಾಗದಲ್ಲಿ ಪ್ರತಿ ಕೊಲೆ ಬಗ್ಗೆಯೂ ಸರ್ಕಾರಕ್ಕೆ ಮಾಹಿತಿ ಇದೆ. ಆ ಕೊಲೆಗಳು ಏಕಾಗುತ್ತಿವೆ ಎನ್ನುವುದೂ ಗೊತ್ತಿದೆ. ಆದರೆ, ‘ಡಬಲ್ ಎಂಜಿನ್ ಸರ್ಕಾರ ಡಬಲ್ ಗೇಮ್’ ಆಡುತ್ತಿದೆ. ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷ ಎಂದು ಬೀಗುವ ಬಿಜೆಪಿ ಪಕ್ಷ, ತನಗೆ ಅಧಿಕಾರ ತಂದುಕೊಟ್ಟ ಯುವಕರ ಜೀವಗಳಿಗೇ ಗ್ಯಾರಂಟಿ ಕೊಡದಷ್ಟು ದುರ್ಬಲವಾಗಿದೆ. ಇದನ್ನೂ ಓದಿ: ದ.ಕ ಜಿಲ್ಲೆಯಲ್ಲಿ 3 ದಿನಗಳ ಕಾಲ ಕಟ್ಟೆಚ್ಚರ – ಗುಪ್ತಚರ ಇಲಾಖೆಯಿಂದ ಸ್ಫೋಟಕ ಮಾಹಿತಿ
Advertisement
Advertisement
ಪ್ರವೀಣ್ ಹತ್ಯೆ ಪ್ರಕರಣವನ್ನು ಎನ್‍ಐಎ ತನಿಖೆಗೆ ಒಪ್ಪಿಸಿ ವೀರಾವೇಶ ಮೆರೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿ ಜನರಿಗೆ ಕೊಟ್ಟ ಸಂದೇಶವೇನು? ಅವರ ನಾಲಿಗೆಯ ಮೇಲೆ ಒಮ್ಮೆಯಾದರೂ “ಶಾಂತಿ ಕಾಪಾಡಿ” ಎನ್ನುವ ಮಾತು ಬಂತಾ? ಬರಲಿಲ್ಲ! ನೆಮ್ಮದಿಗಾಗಿ ಕಿಂಚಿತ್ತು ಕ್ರಮ ವಹಿಸಿದ್ದೀರಾ? ಅದೂ ಇಲ್ಲ. ಹಿಂಸೆಗೆ ಇನ್ನಷ್ಟು ತುಪ್ಪಾ ಸುರಿದು ಬಂದರು. ಎನ್‍ಐಎ ತನಿಖೆಗೆ ವಹಿಸಿದ ಎಷ್ಟು ಪ್ರಕರಣಗಳಿಗೆ ತಾರ್ಕಿಕ ಅಂತ್ಯ ಸಿಕ್ಕಿದೆ? ಒಂದೂ ಇಲ್ಲ. ಎನ್‍ಐಎಗೆ ಒಪ್ಪಿಸಿದ ಮೇಲೆ ತನಿಖೆಯಲ್ಲಿ ಮುಂದೆ ಸಾಗುತ್ತಿದ್ದ ರಾಜ್ಯ ಪೊಲೀಸರಿಗೆ ಮುಖ್ಯಮಂತ್ರಿಗಳು ಕೊಟ್ಟ ಸಂದೇಶವೇನು? ಸ್ವತಃ ಗೃಹ ಸಚಿವರಾಗಿದ್ದ ಅವರು, ಸಿಎಂ ಆದ ಮೇಲೆ ತಮ್ಮ ಅಧೀನದ ಪೊಲೀಸ್ ವ್ಯವಸ್ಥೆಯನ್ನೇ ನಂಬುತ್ತಿಲ್ಲ! ಇದಲ್ಲವೇ ವಿಪರ್ಯಾಸ! ರಾಜ್ಯದಲ್ಲಿ ದಕ್ಷ ಪೊಲೀಸ್ ಅಧಿಕಾರಿಗಳು ಇಲ್ಲವೆ? ನಿಷ್ಠಾವಂತ, ಪ್ರಾಮಾಣಿಕ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ ಕೊಟ್ಟರೆ ಕರಾವಳಿ ಹಿಂಸಾಕಾಂಡವನ್ನು ಮೂಲೋತ್ಪಾಟನೆ ಮಾಡಬಲ್ಲರು. ಬೊಮ್ಮಾಯಿ ಸರ್ಕಾರಕ್ಕೆ ಅದು ಬೇಕಿಲ್ಲ. ಇದನ್ನೂ ಓದಿ: ಈಗ ಲೋಕಸಭಾ ಚುನಾವಣೆ ನಡೆದರೆ ಎನ್‍ಡಿಎಗೆ 362 ಸ್ಥಾನ!
Advertisement
ಕರಾವಳಿ ಭಾಗದಲ್ಲಿ ಪ್ರತಿ ಕೊಲೆ ಬಗ್ಗೆಯೂ ಸರಕಾರಕ್ಕೆ ಮಾಹಿತಿ ಇದೆ. ಆ ಕೊಲೆಗಳು ಏಕಾಗುತ್ತಿವೆ ಎನ್ನುವುದೂ ಗೊತ್ತಿದೆ. ಆದರೆ, ʼಡಬಲ್ ಎಂಜಿನ್ ಸರಕಾರ ಡಬಲ್ ಗೇಮ್ʼ ಆಡುತ್ತಿದೆ. ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷ ಎಂದು ಬೀಗುವ @bjp ಪಕ್ಷ, ತನಗೆ ಅಧಿಕಾರ ತಂದುಕೊಟ್ಟ ಯುವಕರ ಜೀವಗಳಿಗೇ ಗ್ಯಾರಂಟಿ ಕೊಡದಷ್ಟು ದುರ್ಬಲವಾಗಿದೆ!! 2/7
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 30, 2022
ಸಮರ್ಥ ಅಧಿಕಾರಿಗಳನ್ನು ನಂಬದೆ ಎನ್‍ಐಎಗೆ ವಹಿಸುವ ನಾಟಕವಾಡಿ ಕಗ್ಗೊಲೆಗಳ ತನಿಖೆಗೆ ‘ಸಮಾಧಿ’ ಕಟ್ಟಲು ಹೊರಟಿದೆ. ಎರಡು ಕೊಲೆಗಳು ನಡೆದ ಬೆಳ್ಳಾರೆ ಗ್ರಾಮದಲ್ಲಾದರೂ ಬೊಮ್ಮಾಯಿ ಅವರು ಮುಖ್ಯಮಂತ್ರಿ ಹೊಣೆಯ ಘನತೆಗೆ ತಕ್ಕಂತೆ ಶಾಂತಿ ರಕ್ಷಣೆ ಬಗ್ಗೆ ಒಂದು ಮಾತನ್ನಾದರೂ ಹೇಳಿದಿರಾ? ಇಲ್ಲ, ಚುನಾವಣೆ ವರ್ಷವಲ್ಲ. ಕೊಲೆಗಳೇ ಹೆಚ್ಚೆಚ್ಚು ಆಗಬೇಕು, ಅವರ ಮತಪೆಟ್ಟಿಗೆ ಕೊಬ್ಬಬೇಕು. ನೆತ್ತರಧಾರೆ ಹರಿದಷ್ಟೂ ಭರ್ಜರಿ ಮತಧಾರೆ. ಇದನ್ನೂ ಓದಿ: ಅಂಬುಲೆನ್ಸ್ ಟಯರ್ ಬದಲಿಸಲು ಸಹಾಯ ಮಾಡಿದ ರೇಣುಕಾಚಾರ್ಯ
ಬೆಳ್ಳಾರೆ ಬೇಗೆ ಇಡೀ ಕರಾವಳಿಯನ್ನು ವ್ಯಾಪಿಸಿದೆ. ಆದರೆ, ಜೀವ ಭಯದಲ್ಲಿರುವ ಎರಡು ಕೋಮುಗಳ ಜನರು ನೆಮ್ಮದಿಯಿಂದ ಬದುಕಲು ಏನು ಮಾಡಿದ್ದೀರಿ ಬೊಮ್ಮಾಯಿ ಅವರೇ? ಅವರ ಜೀವಕ್ಕೆ ಏನು ಖಾತರಿ ಕೊಟ್ಟಿದ್ದೀರಿ? ಪ್ರತಿ ಕೊಲೆ ಆದಾಗಲೂ ಈ ಕೊಲೆಪಾತಕ ರಾಜಕಾರಣ ನಮ್ಮ ಕುಟುಂಬಕ್ಕೇ ಕೊನೆಯಾಗಲಿ ಎನ್ನುವ ತಾಯಂದಿರ ಆರ್ತನಾದಕ್ಕೆ ನಿಮ್ಮ ಉತ್ತರವೇನು? ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ. ಇದನ್ನು ಸರ್ವಶನಾಶ ಮಾಡಿದ್ದೀರಿ. ಹಿಂಸೆಯ ಎಂಬ ವಿಷಸರ್ಪದ ಹೆಡೆಯಡಿ ಕಟ್ಟಿರುವ ನಿಮ್ಮ ಸಾಮ್ರಾಜ್ಯ ಹಿಂಸೆಗೇ ಬಲಿ ಆಗುವುದು ಖಚಿತ. ಕಾರ್ಯಕರ್ತರ ನೆತ್ತರಿನ ಮೇಲಿನ ಅಧಿಕಾರದ ಸುಖಕ್ಕೆ ಅದೇ ಕಾರ್ಯಕರ್ತರ ಆಕ್ರೋಶವೇ ಚರಮಗೀತೆ ಬರೆಯಲಿದೆ. ಕರಾವಳಿ ಕೆರಳಿದೆ, ಕರ್ನಾಟಕ ಕೆರಳುವುದು ಬಾಕಿ ಇದೆ ಎಂದು ಕಿಡಿಕಾರಿದ್ದಾರೆ.
Live Tv
[brid partner=56869869 player=32851 video=960834 autoplay=true]
[brid partner=56869869 player=32851 video=960834 autoplay=true]