– ಅಧಿಕಾರಿಗೆ ಬ್ಯಾಟ್‍ನಿಂದ ಹೊಡೆದಿದ್ದ ಶಾಸಕನಿಗೆ ಜಾಮೀನು
ಭೋಪಾಲ್: ನಾನು ಮತ್ತೆ ಬ್ಯಾಟಿಂಗ್ ಮಾಡದಂತೆ ಪ್ರಾರ್ಥಿಸುತ್ತೇನೆ ಎಂದು ಬಿಜೆಪಿ ಶಾಸಕ ಆಕಾಶ್ ವಿಜಯ್‍ವರ್ಗಿ ಅವರು, ಪಕ್ಷದ ಕಾರ್ಯಕರ್ತರಿಗೆ ತಿಳಿಸಿದ್ದಾರೆ.
ಮಧ್ಯಪ್ರದೇಶದ ಬಿಜೆಪಿ ಹಿರಿಯ ನಾಯಕ ಕೈಲಾಶ್ ವಿಜಯ್‍ವರ್ಗಿಯ ಅವರ ಪುತ್ರ, ಇಂದೋರ್-3 ಶಾಸಕ ಆಕಾಶ್ ಅವರು ಮುನ್ಸಿಪಲ್ ಕಾರ್ಪೋರೇಷನ್ ಅಧಿಕಾರಿಗೆ ಬ್ಯಾಟ್‍ನಿಂದ ಹೊಡೆದು ಜೈಲಿಗೆ ಸೇರಿದ್ದರು. ಅವರಿಗೆ ಭೋಪಾಲದ ವಿಶೇಷ ನ್ಯಾಯಾಲಯ ಶನಿವಾರ ಜಾಮೀನು ನೀಡಿತ್ತು. ಇಂದು ಜೈಲಿನಿಂದ ಹೊರ ಬಂದಿದ್ದಾರೆ.
Advertisement
Akash Vijayvargiya, BJP MLA: In such a situation when a woman was being dragged in front of police, I couldn't think of doing anything else, not embarrassed at what I did. But I pray to god 'ki vo dobara ballebazi karne ka avsar na de.' #MadhyaPradesh pic.twitter.com/n9OJSfvgMR
— ANI (@ANI) June 30, 2019
Advertisement
ಜೈಲಿನಿಂದ ಹೊರ ಬಂದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕರು, ನಾನು ಜೈಲಿನಲ್ಲಿ ಒಳ್ಳೆಯ ರೀತಿಯಲ್ಲಿ ಕಾಲ ಕಳೆದಿದ್ದೇನೆ. ನನ್ನ ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಹಿತಾಸಕ್ತಿಗಾಗಿ ಶ್ರಮಿಸುತ್ತೇನೆ ಎಂದು ಹೇಳಿದರು.
Advertisement
ಜಾಮೀನು ಪಡೆದು ಜೈಲಿನಿಂದ ಹೊರ ಬಂದ ಆಕಾಶ್ ಅವರನ್ನು ಬೆಂಬಲಿಗರು ಅದ್ಧೂರಿಯಾಗಿ ಸ್ವಾಗತಿಸಿದರು. ಅಷ್ಟೇ ಅಲ್ಲದೆ ಪಕ್ಷದ ಕಚೇರಿ ಮುಂದೆ ಕುಣಿದು ಕುಪ್ಪಳಿಸಿದರು.
Advertisement
Madhya Pradesh: Celebratory firing outside BJP MLA Akash Vijayvargiya's office in Indore after he got bail in an assault case. (29-06) pic.twitter.com/d1j2d03hLY
— ANI (@ANI) June 30, 2019
ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ ಅಧಿಕಾರಿಯ ಮೇಲೆ ಹಲ್ಲೆ ಮಾಡಿದ್ದೇನೆ. ಘಟನೆಯ ಬಗ್ಗೆ ನಾನು ಮುಜುಗುರಕ್ಕೆ ಒಳಗಾಗುವುದಿಲ್ಲ. ಆದರೆ ಮತ್ತೆ ನಾನು ಬ್ಯಾಟಿಂಗ್ ಮಾಡದಂತೆ ಕಾಯುವಂತೆ ದೇವರಲ್ಲಿ ಪಾರ್ಥಿಸುತ್ತೇನೆ ಎಂದು ಹೇಳಿದರು.
ಶಾಸಕ ಆಕಾಶ್, ಸಾರ್ವಜನಿಕರು ಹಾಗೂ ಮಾಧ್ಯಮಗಳ ಮುಂದೆಯೇ ಅಧಿಕಾರಿಗೆ ಬ್ಯಾಟ್‍ನಿಂದ ಹೊಡೆದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಶಾಸಕರ ವರ್ತನೆಯ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಆದರೆ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಶಾಸಕರ ಬೆಂಬಲಕ್ಕೆ ನಿಂತಿದ್ದರು.
Indore: BJP MLA Akash Vijayvargiya who was granted bail by Bhopal's Special Court yesterday,released from jail. He was arrested for thrashing a Municipal Corporation officer with a cricket bat on June 26. #MadhyaPradesh pic.twitter.com/AvPb1HsWhP
— ANI (@ANI) June 30, 2019