ಲಕ್ನೋ: ವ್ಯಕ್ತಿಯೊಬ್ಬರು ತಮ್ಮ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪ್ರಯಾಗರಾಜ್‍ನ ಶಾಹಗಂಜ್ ಪ್ರದೇಶದಲ್ಲಿ ನಡೆದಿದೆ.
Advertisement
ಸ್ವರಣ್ ಸಿಂಗ್ (62) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಸ್ವರಣ್ ಅವರು ಭಾರತೀಯ ಆಹಾರ ನಿಗಮದ (ಎಫ್‍ಸಿಐ) ನಿವೃತ್ತ ಉದ್ಯೋಗಿಯಾಗಿದ್ದರು. ನಿವೃತ್ತ ಅಧಿಕಾರಿ ಬಾತ್ರೂಮ್‍ಗೆ ಬೀಗ ಹಾಕಿಕೊಂಡು ತನ್ನ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡಿದ್ದಾರೆ. ಪರವಾನಗಿ ಪಡೆದ 0.12 ಡಿಬಿಬಿಎಲ್ ಬಂದೂಕು ಆತ್ಮಹತ್ಯೆಗೆ ಬಳಸಲಾಗಿದ್ದು, ಅದನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಬೇಲ್‌ನಿಂದ ಹೊರಬಂದು ಮದುವೆಯಾಗು ಎಂದ – ರೌಡಿ ಅಂತ ರಿಜೆಕ್ಟ್ ಮಾಡಿದ್ದಕ್ಕೆ ಪ್ರೇಯಸಿಯನ್ನೇ ಕೊಂದ
Advertisement
Advertisement
ಪೊಲೀಸರ ಪ್ರಕಾರ, ಕೆಲವು ಆಸ್ತಿ ವಿವಾದಗಳು ಮತ್ತು ಕೌಟುಂಬಿಕ ಸಮಸ್ಯೆಗಳಿಂದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಗುಂಡಿನ ಸದ್ದು ಕೇಳಿದ ಕುಟುಂಬಸ್ಥರು ಬಾತ್ ರೂಮ್‍ಗೆ ಧಾವಿಸಿ ನೋಡಿದಾಗ ಮೃತದೇಹ ಪತ್ತೆಯಾಗಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರೂ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಗುಂಡಿನ ದಾಳಿ ನಡೆಸಿ ಕಾಶ್ಮೀರಿ ಪಂಡಿತನನ್ನು ಹತ್ಯೆಗೈದ ಉಗ್ರರು
Advertisement
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.