DharwadDistrictsKarnatakaLatestMain Post

ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ, ಸಿಎಂ ಬದಲಾವಣೆ ಸಾಧ್ಯವೇ ಇಲ್ಲ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ನಡೆಯಲು ಸಾಧ್ಯವೇ ಇಲ್ಲ. ಅವಧಿ ಮುಗಿದ ಬಳಿಕವೇ ಚುನಾವಣೆ ನಡೆಯುತ್ತದೆ. ಪಂಚರಾಜ್ಯ ಚುನಾವಣೆಗೆ ನಿಗದಿತ ಸಮಯವಿತ್ತು. ಹೀಗಾಗಿ ಪಂಚರಾಜ್ಯ ಚುನಾವಣೆ ನಡೆದಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪಷ್ಟನೆ ನೀಡಿದರು.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ನಾವು ಗುಜರಾತ್ ಜೊತೆಗೆ ಚುನಾವಣೆ ನಡೆಸಲು ಮುಂದಾಗುವುದಿಲ್ಲ. ನಮ್ಮ ಅವಧಿ ಮುಗಿದ ಬಳಿಕವೇ ಚುನಾವಣೆ ನಡೆಯುತ್ತದೆ ಎಂದರು. ಇದನ್ನೂ ಓದಿ: ಕೋವಿಡ್ ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಭಾರೀ ದಂಡ – ಯಾವ ರಾಜ್ಯದಲ್ಲಿ ಎಷ್ಟಿದೆ ಗೊತ್ತಾ?

ಸಿಎಂ ಬಸವರಾಜ ಬೊಮ್ಮಾಯಿ ಎರಡು ಕಡೆ ಸ್ಪರ್ಧಿಸಲಿರುವ ವಿಚಾರವಾಗಿ ಮಾತನಾಡಿದ ಶೆಟ್ಟರ್, ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಇದು ಕೇವಲ ವದಂತಿಯಷ್ಟೇ. ಇನ್ನೂ ಮುಖ್ಯಮಂತ್ರಿ ಬದಲಾವಣೆ ವಿಚಾರ ಕೇವಲ ಮಾಧ್ಯಮದ ಊಹಾಪೋಹ ಎಂದು ತಿಳಿಸಿದರು. ಇದನ್ನೂ ಓದಿ: ಮಳೆಹಾನಿ ಬಗ್ಗೆ ಪರಿಶೀಲನೆ ನಡೆಸಿ ಸರ್ಕಾರಕ್ಕೆ ಶೀಘ್ರವಾಗಿ ವರದಿ ನೀಡಬೇಕು: ಬಿ.ಸಿ.ಪಾಟೀಲ್

ಸಿಎಂ ಬದಲಾವಣೆಯ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. ಪಕ್ಷದಲ್ಲಿ ಆ ರೀತಿಯ ಯಾವುದೇ ಚರ್ಚೆ ನಡೆದಿಲ್ಲ. ಮುಂಬರುವ ಚುನಾವಣೆ ಹಿನ್ನೆಲೆ ಈಗಾಗಲೇ ಪಕ್ಷ ಸಂಘಟನೆಗೆ ಮುಂದಾಗಿದ್ದೇವೆ ಎಂದರು.

Leave a Reply

Your email address will not be published.

Back to top button