ಬೀದರ್: ಗಡಿಜಿಲ್ಲೆ ಬೀದರ್‌ನಲ್ಲಿ ಪೂರ್ವ ಮುಂಗಾರು ಅಬ್ಬರ ಜೋರಾಗಿದ್ದು, ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಸತತವಾಗಿ ಒಂದು ಗಂಟೆಗಳ ಕಾಲ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಬೀದರ್, ಭಾಲ್ಕಿ, ಹುಮ್ನಾಬಾದ್, ಔರಾದ್ ಸೇರಿದಂತೆ ಜಿಲ್ಲೆಯಾದ್ಯಂತ ಅಬ್ಬರದ ಮಳೆಯಾಗಿದೆ.ಇದನ್ನೂ ಓದಿ: ಪರಿಸರದ ಚಿತ್ರ ಕಳಿಸಿದ್ದ ದಾವಣಗೆರೆಯ ಬಾಲಕನಿಗೆ ಪ್ರಧಾನಿ ಮೋದಿ ಮೆಚ್ಚುಗೆ
ಇನ್ನೂ ಬೀದರ್ ಕೇಂದ್ರ ಬಸ್ ನಿಲ್ದಾಣ ಬಹುತೇಕ ಜಲಾವೃತವಾಗಿ ಕೆರೆಯಂತಾಗಿದ್ದು, ಈ ನೀರಿನಲ್ಲಿ ಓಡಾಡಲು ಪ್ರಯಾಣಿಕರು ಹಾಗೂ ವಾಹನ ಸವಾರರು ಹೈರಾಣಾಗುತ್ತಿದ್ದಾರೆ. ಒಂದು ಕಡೆ ರಣಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದರೆ, ಇನ್ನೊಂದು ಕಡೆ ಜನಜೀವನ ಅಸ್ತವ್ಯಸ್ತವಾಗಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ಇಂದಿನಿಂದ ಐದು ದಿನಗಳ ಕಾಲ ಮಳೆಯ ಆರ್ಭಟ ಮುಂದುವರಿಯಲಿದ್ದು, ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಕೆಲವು ಜಿಲ್ಲೆಗಳಿಗೆ ಯಲ್ಲೋ ಹಾಗೂ ಆರೇಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇದನ್ನೂ ಓದಿ: ಕಾವೇರಿ ಒಡಲಲ್ಲೇ ಕುಡಿಯುವ ನೀರಿಗೆ ಹಾಹಾಕಾರ..!