Connect with us

Bengaluru City

ಮುತ್ತಿನ ನಗರಿಯಲ್ಲಿ ರಾಜಮೌಳಿ ಜೊತೆ ಕೆಜಿಎಫ್

Published

on

– ಗಡಿದಾಟಿದ ರಾಕಿಯ ಖಡಕ್ ಸದ್ದು

ಬೆಂಗಳೂರು: ಕನ್ನಡದ ಕೆಜಿಎಫ್ ಕರುನಾಡ ಗಡಿ ದಾಟಿದ್ದು, ಎಲ್ಲಡೆ ರಾಕಿಯ ಗುಂಗು ಕಾಣುತ್ತಿದೆ. ಕೆಜಿಎಫ್ ಚಿತ್ರದ ವಿಶೇಷ ಕಾರ್ಯಕ್ರಮವೊಂದನ್ನು ಡಿಸೆಂಬರ್ 9ರಂದು ಹೈದರಾಬಾದ್ ನಲ್ಲಿ ನಡೆಯಲಿದೆ. ಈ ಸಂಬಂಧ ಯಶ್ ತಮ್ಮ ಫೇಸ್ ಬುಕ್ ಪೇಜಿನಲ್ಲಿ ಬರೆದುಕೊಂಡಿದ್ದಾರೆ.

ಸಿನಿಮಾ ರಿಲೀಸ್ ಮುನ್ನ ಟಾಲಿವುಡ್ ಮತ್ತು ಬಾಲಿವುಡ್ ಅಂಗಳದಲ್ಲಿ ದೊಡ್ಡ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಾರೆ. ಅದರಂತೆ ಕೆಜಿಎಫ್ ಚಿತ್ರತಂಡ ಹೈದರಾಬಾದ್ ನಲ್ಲಿ ಸಿನಿಮಾದ ಇವೆಂಟ್ ಏರ್ಪಡಿಸಿದೆ. ಹೈದರಾಬಾದ್ ನಗರದ ಜ್ಯೂಬ್ಲಿ ಹಿಲ್ಸ್, ಜೆಆರ್‍ಸಿ ಕನ್ವೆಂನಷನ್ ನಲ್ಲಿ ಸಂಜೆ 6.30ಕ್ಕೆ ಬಾಹುಬಲಿ ನಿರ್ದೇಶಕ ರಾಜಮೌಳಿ ಅವರ ಜೊತೆಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಮಂಗಳವಾರ ಸಂಜೆ ‘ಸಲಾಮ್ ರಾಕಿ ಭಾಯ್’ ಹಾಡಿನ ಲಿರಿಕಲ್ ವಿಡಿಯೋವನ್ನು 5 ಭಾಷೆಗಳಲ್ಲಿಯೂ ರಿಲೀಸ್ ಆಗಿತ್ತು. ಬುಧವಾರ ಚಿತ್ರದ ಎರಡನೇ ಟ್ರೇಲರ್ ಬಿಡುಗಡೆಯಾಗಿದ್ದು, ಸಿನಿಮಾ ಭರವಸೆಯನ್ನು ಹೆಚ್ಚಿಸಿದೆ.

ಕೋಲಾರದ ಕೆಜಿಎಫ್ ನಲ್ಲಿ ಹುಟ್ಟುವ ಮಗು ಮುಂಬೈನಲ್ಲಿ ತನ್ನ ಹೆಜ್ಜೆಯನ್ನು ಮೂಡಿಸುತ್ತಾನೆ. ನೀನು ಹೇಗೆ ಬಾಳ್ತಿಯಾ ನನಗೆ ಗೊತ್ತಿಲ್ಲ. ಆದ್ರೆ ಸಾಯುವ ಮುನ್ನ ನೀನೊಬ್ಬ ಶ್ರೀಮಂತ, ಅತ್ಯಂತ ಶಕ್ತಿಯುಳ್ಳವನಾಗಿರಬೇಕು ಎಂದು ಮಗನಿಂದ ಮಾತು ಪಡೆದುಕೊಳ್ಳುವ ತಾಯಿ. ಮುಂಬೈ ಸೇರಿದ ಮೇಲೆ ಬದಲಾಗುವ ಬದುಕು. ಮತ್ತೆ ಕೋಲಾರ ಸೇರುವ ಹುಡುಗ. ಹೀಗೆ ಕಥೆಯ ಒಂದೊಂದು ಎಳೆಯನ್ನು ಟ್ರೇಲರ್ ನಲ್ಲಿ ತೋರಿಸಲಾಗಿದೆ. ಅದೇ ರೀತಿಯಲ್ಲಿ ಇತರೆ ಕಲಾವಿದರ ಪಾತ್ರವನ್ನು ಇಲ್ಲಿ ಪರಿಚಯಿಸಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Click to comment

Leave a Reply

Your email address will not be published. Required fields are marked *