ಹುಬ್ಬಳ್ಳಿ: ಕೇಂದ್ರ ಸರ್ಕಾರದ ನೂತನ ಶಿಕ್ಷಣ ನೀತಿಯನ್ನು ರಾಷ್ಟ್ರದಲ್ಲಿ ಮಟ್ಟದಲ್ಲಿ ಅನುಷ್ಠಾನಕ್ಕೆ ತರಲಾಗುತ್ತಿದೆ. ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆಯ ಕಲಿಕೆಗೂ ಆದ್ಯತೆಯನ್ನು ನೀಡಲಾಗಿದೆ ಎಂದು ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.
ನವನಗರದ ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಜೊತೆ ರಾಜ್ಯಪಾಲರು ಸಂವಾದ ನಡೆಸಿದ್ದು ವಾರ್ತಾ ಇಲಾಖೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ.
Advertisement
Advertisement
ರಾಜ್ಯಪಾಲರು ಹೇಳಿದ್ದೇನು?
ದೇಶದ ಸಂವಿಧಾನ ಹಾಗೂ ಕಾನೂನು ವ್ಯವಸ್ಥೆ ಜಗತ್ತಿನಲ್ಲಿಯೇ ಶ್ರೇಷ್ಠವಾದದು. ಇದನ್ನು ಶ್ರೇಷ್ಠವಾಗಿಸುವಲ್ಲಿ ನಮ್ಮೆಲ್ಲರ ಕೊಡುಗೆ ಮುಖ್ಯ. ರಾಜ್ಯಪಾಲನಾಗಿ ಅಧಿಕಾರ ಸ್ವೀಕರಿಸಿದ ನಂತರ ಎರಡನೇ ಬಾರಿಗೆ ಹುಬ್ಬಳ್ಳಿ ಧಾರವಾಡಕ್ಕೆ ಭೇಟಿ ನೀಡುತ್ತಿದ್ದೇನೆ. ಕರ್ನಾಟಕ, ಕೃಷಿ ಹಾಗೂ ಕಾನೂನು ವಿಶ್ವವಿದ್ಯಾಲಯಗಳು ರಾಷ್ಟ್ರ ಮಟ್ಟದ ಉನ್ನತ ಶಿಕ್ಷಣ ಕೇಂದ್ರಗಳಾಗಿವೆ. ಕಾನೂನು ವಿಶ್ವ ವಿದ್ಯಾಲಯದಲ್ಲಿ ಓದಿದವರು ದೇಶದ ಸರ್ವೋಚ್ಚ ನ್ಯಾಯಾಲಯ ಹಾಗೂ ಉಚ್ಛ ನ್ಯಾಯಾಲಯಗಳಲ್ಲಿ ಕೆಲಸ ನಿರ್ವಹಸಿ ಹೆಸರುಗಳಿಸಿದ್ದಾರೆ. ಕಾನೂನು ವಿಶ್ವ ವಿದ್ಯಾಲಯದ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಲು ಸರ್ಕಾರ ಸಿದ್ಧವಿದೆ. ವಿಶ್ವ ವಿದ್ಯಾಲಯ ಸುಧಾರಣೆ ಕುರಿತು ಸಿಂಡಿಕೇಟ್ ಸದಸ್ಯರು, ಅಧ್ಯಾಪಕರು, ವಿದ್ಯಾರ್ಥಿಗಳು ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಬಹದು. ಇವುಗಳ ಕುರಿತು ಲಿಖಿತವಾಗಿ ಮನವಿ ಸಲ್ಲಿಸಿದರೆ ಅವುಗಳನ್ನು ಪರಮಾಧ್ಯತೆ ಮೇರೆಗೆ ಪರಿಹರಿಸುವುದಾಗಿ ಆಶ್ವಾಸನೆ ನೀಡಿದರು. ಇದನ್ನೂ ಓದಿ: ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ, ಮತಭಿಕ್ಷೆ ನೀಡಿ: ಹೆಚ್‍ಡಿಡಿ
Advertisement
Advertisement
ಸಂವಾದದಲ್ಲಿ ಮಾತನಾಡಿದ ವಿದ್ಯಾರ್ಥಿ ಪ್ರಭಯನ್ ಚರ್ಕಭೋರ್ತಿ ವಿಶ್ವ ವಿದ್ವಾಯಲಯದಲ್ಲಿನ ಅಣಕು ನ್ಯಾಯಾಲಯ ಕಲ್ಪನೆ ವಿದ್ಯಾರ್ಥಿಗಳಗೆ ಅನುಕೂಲವಾಗಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ಕಾನೂನು ಜ್ಞಾನ ಲಭಿಸುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ವಿದ್ಯಾರ್ಥಿನಿ ಸಿದ್ಧೀ ನಾಗವೇಕರಿ ನೂತನ ಶಿಕ್ಷಣ ನೀತಿಯಲ್ಲಿನ ತ್ರಿಭಾಷ ಕಲಿಕೆಯ ಅನುಷ್ಠಾನದ ಕುರಿತು ಸಂವಾದಿಸಿದರು.
ರಾಜ್ಯಪಾಲರ ಕನ್ನಡ ಕಲಿಕೆ ಪ್ರೀತಿ
ಸಂವಾದದ ಆರಂಭದಲ್ಲಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಾನು ಮಧ್ಯಪ್ರದೇಶದವನು. ಹಿಂದಿ ಭಾಷಿಕ. ಇಂಗ್ಲೀಷ್‌ನಲ್ಲಿ ಸಭೆ ಉದ್ದೇಶಿಸಿ ಮಾತನಾಡುವುದು ಕಡಿಮೆ. ಕರ್ನಾಟಕಕ್ಕೆ ಆಗಮಿಸಿದ ಮೇಲೆ ಕನ್ನಡ ಕಲಿಯಲು ಪ್ರಯತ್ನಿಸುತ್ತಿದ್ದೇನೆ ಎಂದು ಕನ್ನಡ ಭಾಷೆಯ ಕುರಿತಾದ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲರು ವಿಶ್ವ ವಿದ್ಯಾಲಯದ ಗ್ರಂಥಾಲಯ ಹಾಗೂ ಮುಖ್ಯ ಸಮುಚ್ಚಯ ಕಟ್ಟಡ, ಅಣುಕು ನ್ಯಾಯಾಲಯಗಳನ್ನು ವೀಕ್ಷಿಸಿದರು.
ಕಾನೂನು ವಿ.ವಿ.ಉಪಕುಲಪತಿ ಈಶ್ವರ ಭಟ್, ರಿಜಿಸ್ಟಾರ್ ಮಹಮದ್ ಜುಬೇರ್, ಕುಲಸಚಿವೆ ರತ್ನ ಭರಮಗೌಡರ್, ನೊಂದಣಿ ಮತ್ತು ಮೌಲ್ಯಮಾಪನ ವಿಭಾಗದ ಜಿ.ಬಿ.ಪಾಟೀಲ ಸೇರಿದಂತೆ ಸಿಂಡಿಕೇಟ್ ಸದ್ಯರಾದ ಮಹೇಶ್ ಓಡೆಯರ್, ಗಿರಿಜಾ ಹಿರೇಮಠ್, ಚಂದ್ರಮೋಹನ್ ಕಾಳೆ ಮತ್ತಿತರು ಉಪಸ್ಥಿತರಿದ್ದರು.