– ಹೊಸ ಪಂಚೆ, ಬಟ್ಟೆ ನೀಡಿದ ಡ್ರೈವರ್, ಕಂಡಕ್ಟರ್
ಹಾಸನ: ಒಂಬತ್ತು ತಿಂಗಳ ತುಂಬು ಗರ್ಭಿಣಿಯೊಬ್ಬರು ಕೆಎಸ್ಆರ್‌ಟಿಸಿ ಬಸ್ಸಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಹಾಸನದಲ್ಲಿ ನಡೆದಿದೆ.
ಷಹೀನಾ ಬಸ್ಸಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದವರು. ಹುಬ್ಬಳ್ಳಿ ಮೂಲದ ಷಹೀನಾರನ್ನ ಮಡಿಕೇರಿಯ ಹುಡುಗನೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ಮಂಗಳವಾರ ಷಹೀನಾ ಪೋಷಕರ ಜೊತೆ ಬಸ್ಸಿನಲ್ಲಿ ಬರುತ್ತಿದ್ದಾಗ ಹಾಸನದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಹೆರಿಗೆ ನೋವು ಕಾಣಿಸಿಕೊಂಡಿದೆ. ಸ್ವಲ್ಪ ಸಮಯದ ನಂತರ ಷಹೀನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
Advertisement
Advertisement
ತಕ್ಷಣ ಬಸ್ ಚಾಲಕ ಮತ್ತು ನಿರ್ವಾಹಕ ಸ್ವಲ್ಪ ಸಮಯ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಬಸ್ ನಿಲ್ಲಿಸಿದ್ದಾರೆ. ಅಷ್ಟೇ ಅಲ್ಲದೇ ಮಹಿಳೆಗೆ ಹೊಸ ಪಂಚೆ ಮತ್ತು ಬಟ್ಟೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ತಕ್ಷಣ ಅಂಬುಲೆನ್ಸ್‌ಗೆ ಕರೆ ಮಾಡಿ ಮಗು ಮತ್ತು ತಾಯಿಯನ್ನು ಹಾಸನ ಹಿಮ್ಸ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.
Advertisement
ತಾಯಿ ಮಗು ಆರೋಗ್ಯವಾಗಿದ್ದು, ಗರ್ಭಿಣಿಯ ಕಷ್ಟಕ್ಕೆ ಸ್ಪಂದಿಸಿದ ಕೆಎಸ್ಆರ್‌ಟಿಸಿ ನೌಕರರ ಗುಣಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.