ಚಂಡೀಗಢ: ಮೂಕ ಪ್ರಾಣಿ ಮೇಕೆ ಮೇಲೆ ಎಂಟು ಮಂದಿ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದು, ಪರಿಣಾಮ ಮೇಕೆ ಮೃತಪಟ್ಟಿರುವ ಘಟನೆ ಹರಿಯಾಣದ ಮೇವತ್ ನಲ್ಲಿ ನಡೆದಿದೆ.
ಈ ಬಗ್ಗೆ ಮೇಕೆಯ ಮಾಲೀಕ ಗುರುವಾರ ಆರೋಪಿಗಳ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಾವಕಾರ್, ಹರೂನ್, ಜಾಫರ್ ಸೇರಿದಂತೆ ಐದು ಮಂದಿ ಮೇಲೆ ದೂರು ದಾಖಲಿಸಿದ್ದಾರೆ. ಇನ್ನು 5 ಮಂದಿಯ ಗುರುತು ಪತ್ತೆಯಾಗಿಲ್ಲ. ಆದರೆ ಆರೋಪಿಗಳೆಲ್ಲರೂ ತಲೆಮರೆಸಿಕೊಂಡಿದ್ದಾರೆ. ಈ ಘಟನೆ ಬುಧವಾರ ರಾತ್ರಿ ನಡೆದಿದ್ದು, ಮರುದಿನ ನಾವು ದೂರು ದಾಖಲಿಸಿಕೊಂಡಿದ್ದೇವೆ ಎಂದು ನಾಗಿನ ಪೊಲೀಸ್ ಠಾಣೆಯ ಇನ್ ಚಾರ್ಜ್ ರಾಜ್ಬಿರ್ ಸಿಂಗ್ ಹೇಳಿದ್ದಾರೆ.
ಎಫ್ಐಆರ್ ದಾಖಲಿಸಲು ಪೊಲೀಸರಿಗೆ ಸಹಾಯ ಮಾಡಿದ್ದೇವೆ. ಶೀಘ್ರವಾಗಿ ಆರೋಪಿಗಳನ್ನು ಬಂಧಿಸಬೇಕು. ಈ ರೀತಿ ಕೃತ್ಯ ಎಸಗಿದವರಿಗೆ ಕಠಿಣವಾದ ಶಿಕ್ಷೆ ನೀಡಿ ಎಂದು ಪೇಟಾ ಸಂಘಟನೆ ಸರ್ಕಾರಕ್ಕೆ ಮನವಿ ಮಾಡಿದೆ.
1960ರ ಪ್ರಾಣಿಗಳ ಕಾಯ್ದೆಯಡಿ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ಸದ್ಯಕ್ಕೆ ಮೇಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ವರದಿಗಾಗಿ ಕಾಯುತ್ತಿದ್ದೇವೆ. ವರದಿ ಬಂದ ನಂತರ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
Complaint registered against eight men in Haryana's Mewat district for allegedly gang-raping a pregnant goat, who later died
Read @ANI story | https://t.co/XbDWnfUerl pic.twitter.com/gcsC1moRzz
— ANI Digital (@ani_digital) July 28, 2018