ಮಂಗಳೂರು: ತುಂಬು ಗರ್ಭಿಣಿಯಾಗಿದ್ದ ಪೊಲೀಸ್ ಪೇದೆಯೊಬ್ಬರನ್ನು ಡಿಸಿಎಂ ಆಗಮನದ ವೇಳೆ ಬಂದೋಬಸ್ತಿಗೆ ನಿಯೋಜಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಶುಕ್ರವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಡಿಸಿಎಂ ಅಶ್ವಥ್ ನಾರಾಯಣ್ ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗಾಗಿ ಮಣಿಪಾಲಕ್ಕೆ ರಸ್ತೆ ಮೂಲಕ ತೆರಳಿದ್ದರು. ಈ ಸಂದರ್ಭದಲ್ಲಿ ಅವರಿಗೆ ಬಂದೋಬಸ್ತ್ ನೀಡಲು ಮುಲ್ಕಿ ಪೊಲೀಸ್ ಠಾಣೆಯಿಂದ ಗರ್ಭಿಣಿ ಪೇದೆಯನ್ನು ನಿಯುಕ್ತಿಗೊಳಿಸಲಾಗಿತ್ತು. ತುಂಬು ಗರ್ಭಿಣಿಯಾಗಿದ್ದ ಪೇದೆ ರಸ್ತೆಯಲ್ಲಿ ಲಾಠಿ ಹಿಡಿದು ನಿಂತಿರುವ ಚಿತ್ರವನ್ನು ಸಾರ್ವಜನಿಕರು ಮೊಬೈಲ್‍ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.
Advertisement
Advertisement
ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ.ಎಸ್ ಹರ್ಷ ಸಾರ್ವಜನಿಕರಲ್ಲಿ ಕ್ಷಮೆಯಾಚಿಸಿದ್ದಾರೆ. ಜೊತೆಗೆ ಗರ್ಭಿಣಿ ಪೇದೆಯನ್ನು ಬಂದೋಬಸ್ತಿಗೆ ನಿಯೋಜಿಸಿದ ಮುಲ್ಕಿ ಠಾಣಾಧಿಕಾರಿಯಿಂದ ವರದಿ ನೀಡುವಂತೆ ಆದೇಶಿಸಿದ್ದಾರೆ.