ಕಲಬುರಗಿ: ಒಂದೂವರೆ ವರ್ಷದ ಮಗುವಿನೊಂದಿಗೆ ನಾಲ್ಕು ತಿಂಗಳ ಗರ್ಭಿಣಿಯೊಬ್ಬಳು ತೆರೆದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ನಡೆದಿದೆ.
ಅಂಬಿಕಾ (25) ತನ್ನ ಒಂದೂವರೆ ವರ್ಷದ ಪುತ್ರ ಆರಾಧ್ಯನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಂಬಿಕಾ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಳು ಎಂದು ತಿಳಿದುಬಂದಿದೆ. ಮೂರು ವರ್ಷಗಳ ಹಿಂದೆ ಅಂಬಿಕಾ, ವೀರಭದ್ರಪ್ಪ ಎಂಬಾತನನ್ನು ವಿವಾಹವಾಗಿದ್ದಳು. ಇದನ್ನೂ ಓದಿ: ಕೆ.ಆರ್ ಪುರ ತ್ರಿಬಲ್ ಮರ್ಡರ್ ಕೇಸ್; ಒಂದು ಕೊಲೆಗೆ ಸ್ಕೆಚ್, ಆಗಿದ್ದು ಮೂರು ಮರ್ಡರ್
ಮಂಗಳವಾರ (ಜೂ.23) ಬೆಳಿಗ್ಗೆ ಮನೆಯಿಂದ ಮನೆಯಿಂದ ಹೊರಟು ಹೋಗಿದ್ದಳು. ಮಹಿಳೆ ಕಾಣದಿದ್ದಾಗ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಗ್ರಾಮದ ಹೊರ ಭಾಗದಲ್ಲಿದ್ದ ತೆರೆದ ಬಾವಿಯ ಸಮೀಪ ಅಂಬಿಕಾ ಅವರ ಚಪ್ಪಲಿ ಪತ್ತೆಯಾಗಿದ್ದು, ಅನುಮಾನಗೊಂಡು ಬಾವಿಯಲ್ಲಿ ಶೋಧ ಕಾರ್ಯ ನಡೆಸಲಾಗಿದೆ. ಈ ವೇಳೆ ಬಾವಿಯೊಳಗೆ ತಾಯಿ ಮತ್ತು ಮಗುವಿನ ಮೃತದೇಹಗಳು ಪತ್ತೆಯಾಗಿವೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ದುರ್ಘಟನೆ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಸಂಬಂಧ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಗೆಳೆಯನ ಆತ್ಮಹತ್ಯೆ ವಿಚಾರ ಪೊಲೀಸರಿಗೆ ತಿಳಿಸಿದ್ದೇ ಕೃಷಿ ತಾಪಂಡ
