ಹೈದರಾಬಾದ್: ಗರ್ಭಿಣಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನಲೆಯಲ್ಲಿ ವೈದ್ಯರು ಹರಿಗೆ ಮಾಡಲು ಹಿಂದೇಟು ಹಾಕಿದ್ದಾರೆ. ಈ ವೇಳೆ ಮಹಿಳೆ ನಡುರಸ್ತೆಯಲ್ಲೇ ಮಗುವಿಗೆ ಜನ್ಮ ಕೊಟ್ಟಿರುವ ಘಟನೆ ತೆಲಂಗಣದಲ್ಲಿ ನಡೆದಿದೆ.
Advertisement
ನಾಗರ್ಕರ್ನೂಲ್ ಜಿಲ್ಲೆಯ ಅಚಂಪೇಟ್ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ, ಹೆರಿಗೆ ನೋವಿನಿಂದ ಆಸ್ಪತ್ರೆಗೆ ಬಂದ ಗರ್ಭಿಣಿಯೋರ್ವರಿಗೆ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಆಸ್ಪತ್ರೆಯೊಳಗೆ ದಾಖಲು ಮಾಡಿಕೊಳ್ಳಲು ವೈದ್ಯರು ನಿರಾಕರಣೆ ಮಾಡಿದ್ದಾರೆ. ಆಸ್ಪತ್ರೆ ಹೊರಗಿನ ರಸ್ತೆಯಲ್ಲೇ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾಳೆ. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಆರೋಗ್ಯ ವೈದ್ಯಾಧಿಕಾರಿಗಳು, ಆಸ್ಪತ್ರೆಗೆ ಬಂದ ಗರ್ಭಿಣಿಗೆ ವೇಳೆ ಸೋಂಕು ಇರುವುದು ದೃಢಪಟ್ಟಿದೆ. ಇದೇ ಕಾರಣಕ್ಕಾಗಿ ಬೇರೆ ಆರೋಗ್ಯ ಕೇಂದ್ರಕ್ಕೆ ಹೋಗುವಂತೆ ವೈದ್ಯರು ಸೂಚನೆ ನೀಡಿದ್ದಾರೆ. ಆದರೆ ಗರ್ಭಿಣಿಗೆ ರಸ್ತೆಯಲ್ಲೇ ಹೆರಿಗೆ ಆಗಿದೆ. ಇದಾದ ಬಳಿಕ ಆಕೆಯನ್ನ ಒಳಗೆ ಕರೆತರಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಆರೋಗ್ಯ ಸೂಚ್ಯಂಕದಲ್ಲಿ ರಾಜ್ಯವನ್ನು ಮುಂಚೂಣಿಗೆ ತರಲು ಅಗತ್ಯ ಕ್ರಮ: ಡಾ.ಕೆ.ಸುಧಾಕರ್
Advertisement
Advertisement
ವೈದ್ಯಕೀಯ ಸಿಬ್ಬಂದಿ ಅಮಾನತು: ನಿರ್ಲಕ್ಷ್ಯ ವಹಿಸಿರುವುದಕ್ಕಾಗಿ ಸಮುದಾಯ ಆರೋಗ್ಯ ಕೇಂದ್ರದ ಸೂಪರಿಂಡೆಂಟ್, ವೈದ್ಯರನ್ನ ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ. ಕೆ. ರಮೇಶ್ ರೆಡ್ಡಿ ತಿಳಿಸಿದ್ದಾರೆ. ಕೋವಿಡ್ ದೃಢಪಟ್ಟ ಗರ್ಭಿಣಿಯರಿಗೆ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳುವುದನ್ನ ನಿರಾಕರಿಸದಂತೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಹೇಳಿದ್ದಾರೆ. ಇದನ್ನೂ ಓದಿ: ಸತ್ಯ, ಸಮಾನತೆಯ ಮೊದಲ ಹೆಜ್ಜೆಗೆ ನನ್ನ ಪ್ರಣಾಮಗಳು: ರಾಹುಲ್ ಗಾಂಧಿ