ಚಾಮರಾಜನಗರ: ವೈದ್ಯರ ನಿರ್ಲಕ್ಷ್ಯದಿಂದ ದಿಂದ 7 ತಿಂಗಳ ಗರ್ಭಿಣಿಯೊಬ್ಬರು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ನಡೆದಿದೆ.
ನಗರದ ಅಂಬೇಡ್ಕರ್ ಬಡಾವಣೆಯ ನಿವಾಸಿ ಬಸವಣ್ಣ ಎಂಬವರ ಪುತ್ರಿ ನೇತ್ರಾವತಿ ಮೃತ ದುರ್ದೈವಿ. ನೇತ್ರಾವತಿ ಅವರು ತಿಂಗಳ ಚೆಕಪ್‍ಗಾಗಿ ಜಿಲ್ಲಾಸ್ಪತ್ರೆಗೆ ಬಂದಿದ್ದರು. ಈ ವೇಳೆ ತಪಾಸಣೆ ಮಾಡಿದ ವೈದ್ಯರು ಇಂಜೆಕ್ಷನ್ ನೀಡಿದ್ದಾರೆ.
ಇಂಜೆಕ್ಷನ್ ನೀಡಿದ ಬಳಿಕ ಲೋ ಬಿಪಿಗೆ ಒಳಗಾದ ನೇತ್ರಾವತಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡ ವೈದ್ಯರು ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇತ್ರಾವತಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ.
ಮಗಳನ್ನು ಕಳೆದುಕೊಂಡ ತಂದೆ, ತಾಯಿ ಹಾಗೂ ಸಂಬಂಧಿಕರು ಕಣ್ಣೀರಿಡುತ್ತಾ ವೈದ್ಯರಿಗೆ ಈಗ ಶಾಪ ಹಾಕುತ್ತಿದ್ದಾರೆ. ಮಗಳ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವಾಗಿದೆ ಎಂದು ನೇತ್ರಾವತಿ ತಂದೆ ಬಸವಣ್ಣ ವೈದ್ಯರ ವಿರುದ್ಧ ಆರೋಪಿಸಿದ್ದಾರೆ. ಕೆಲ ಹೊತ್ತು ಆಸ್ಪತ್ರೆಯ ಮುಂಭಾಗದಲ್ಲಿ ಕುಳಿತ ನೇತ್ರಾವತಿ ಸಂಬಂಧಿಕರು ವೈದ್ಯರ ವಿರುದ್ಧ ಧಿಕ್ಕಾರ ಕೂಗಿ, ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv