ಅಮರಾವತಿ: ರೈಲ್ವೆ ಪ್ಲಾಟ್‌ಫಾರ್ಮ್ನಲ್ಲಿ ಮಲಗಿದ್ದ ಗರ್ಭಿಣಿಯ ಮೇಲೆ ಓರ್ವ ಅಪ್ರಾಪ್ತ ಸೇರಿ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಆಂಧ್ರಪ್ರದೇಶದ ರೆಪಲ್ಲೆ ರೈಲು ನಿಲ್ದಾಣದಲ್ಲಿ ನಡೆದಿದೆ.
ನಿನ್ನೆಯಷ್ಟೇ ಇದೇ ರೈಲ್ವೆ ನಿಲ್ದಾಣದಲ್ಲಿ ವಲಸೆ ಕಾರ್ಮಿಕ ಮಹಿಳೆಯ ಮೇಲೆ ಅತ್ಯಾಚಾರ ನಡೆದಿತ್ತು. ಇದಾದ 24 ಗಂಟೆಗಳಲ್ಲಿ ಅದೇ ರೀತಿಯಲ್ಲಿ ಮತ್ತೊಂದು ಕೃತ್ಯ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ರೆಪಲ್ಲೆ ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿ ಮೂವರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಶವರ್ಮ ತಿಂದು 16 ವರ್ಷದ ವಿದ್ಯಾರ್ಥಿನಿ ಸಾವು, 18 ಮಂದಿ ಅಸ್ವಸ್ಥ
ಮಹಿಳೆಯು ತನ್ನ ಪತಿ ಮತ್ತು ಮಕ್ಕಳೊಂದಿಗೆ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್ನಲ್ಲಿ ಮಲಗಿದ್ದ ವೇಳೆ ಮೂವರು ಆರೋಪಿಗಳು ಅವರ ಬಳಿಗೆ ಬಂದು ಪತಿಯನ್ನು ಹಿಡಿದು ಥಳಿಸಿದ್ದಾರೆ. ನಂತರ ಗರ್ಭಿಣಿಯನ್ನು ಸಮೀಪದ ಪೊದೆಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಮೂವರು ಆರೋಪಿಗಳು ಕುಡಿದ ಅಮಲಿನಲ್ಲಿ ಪತಿ ಮೇಲೆ ಹಲ್ಲೆ ನಡೆಸಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಬಪಟ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ ಆರೋಪ – ಐಎಎಸ್ ಅಧಿಕಾರಿ ವಿರುದ್ಧ ಕೇಸ್ ದಾಖಲು
ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್‌ಮೋಹನ ರೆಡ್ಡಿ ಹಾಗೂ ಮಹಿಳಾ ಆಯೋಗದ ಅಧ್ಯಕ್ಷೆ ವಾಸಿರೆಡ್ಡಿ ಪದ್ಮಾ, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಸಂತ್ರಸ್ತೆಯನ್ನು ಚಿಕಿತ್ಸೆಗಾಗಿ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್, ಒಂಗೋಲ್)ಗೆ ದಾಖಲಿಸಲಾಗಿದೆ.