ಮುಂಬೈ: ಅಂಬುಲೆನ್ಸ್‌ನ (Ambulance) ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡು ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಘಟನೆ ಮಹಾರಾಷ್ಟ್ರದ (Maharashtra) ಜಲಗಾಂವ್ ಜಿಲ್ಲೆಯಲ್ಲಿ ಬುಧವಾರ ಸಂಜೆ ನಡೆದಿದೆ.
ಅಂಬುಲೆನ್ಸ್‌ಗೆ ಬೆಂಕಿ ಹೊತ್ತಿಕೊಂಡು ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡಿರುವ ದೃಶ್ಯ ಜನರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಸ್ಫೋಟದ ತೀವ್ರತೆಗೆ ಬೆಂಕಿ ಭಾರೀ ಎತ್ತರಕ್ಕೆ ಚಿಮ್ಮಿದೆ. ಅಲ್ಲದೇ ಕೆಲವು ಮನೆಗಳ ಗಾಜುಗಳು ಪುಡಿಪುಡಿಯಾಗಿವೆ. ಘಟನೆಯಲ್ಲಿ ಯಾರಿಗೂ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
Advertisement
Advertisement
ಇಂಜಿನ್‌ನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಚಾಲಕ, ಅಂಬುಲೆನ್ಸ್‌ನಲ್ಲಿದ್ದ ಗರ್ಭಿಣಿ ಮಹಿಳೆ ಮತ್ತು ಅವರ ಕುಟುಂಬಸ್ಥರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾನೆ. ಬಳಿಕ ಅಂಬುಲೆನ್ಸ್‌ನ ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡಿದೆ ಮತ್ತು ಕೆಲವೇ ನಿಮಿಷಗಳಲ್ಲಿ ವಾಹನದಲ್ಲಿದ್ದ ಆಮ್ಲಜನಕ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ.
Advertisement
Advertisement
ಎರಾಂಡೋಲ್ ಸರ್ಕಾರಿ ಆಸ್ಪತ್ರೆಯಿಂದ ಜಲಗಾಂವ್ ಜಿಲ್ಲಾ ಆಸ್ಪತ್ರೆಗೆ ಅಂಬುಲೆನ್ಸ್ ಗರ್ಭಿಣಿ ಮಹಿಳೆ ಮತ್ತು ಅವರ ಕುಟುಂಬವನ್ನು ಕರೆದೊಯ್ಯುತ್ತಿದ್ದಾಗ ದಾದಾ ವಾಡಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆಯಲ್ಲಿ ಈ ಘಟನೆ ನಡೆದಿದೆ.