ಲಕ್ನೋ: ಅವಿವಾಹಿತ ಯುವತಿಯೊಬ್ಬಳು ಗರ್ಭಿಣಿ ಎಂಬ ವಿಚಾರ ತಿಳಿದು ಆಕೆಯ ಕುಟುಂಬಸ್ಥರು ಬೆಂಕಿ ಹಚ್ಚಿದ ಪ್ರಕರಣ ಉತ್ತರ ಪ್ರದೇಶದ (Uttar Pradesh) ಹಾಪುರ್‌ನಲ್ಲಿ ನಡೆದಿದೆ. ಆಕೆಯ ದೇಹ 70% ಸುಟ್ಟು ಹೋಗಿದ್ದು, ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು (Police) ತಿಳಿಸಿದ್ದಾರೆ.
ಯುವತಿ ಅವಿವಾಹಿತಳಾಗಿದ್ದು ಆಕೆ ಅದೇ ಊರಿನ ಯುವಕನೊಂದಿಗೆ ದೈಹಿಕ ಸಂಬಂಧ ಹೊಂದಿದ್ದಳು. ಈ ವಿಚಾರವಾಗಿ ಯುವತಿಯ ತಾಯಿ ಹಾಗೂ ಸಹೋದರ ಯುವಕನೊಂದಿಗೆ ಗಲಾಟೆಯನ್ನು ಮಾಡಿದ್ದರು. ಬಳಿಕ ಯುವತಿ ಗರ್ಭಿಣಿ ಎಂಬ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಆಕೆಯನ್ನು ಸಮೀಪದ ಅರಣ್ಯಕ್ಕೆ ಕರೆದೊಯ್ದು ಪೆಟ್ರೋಲ್ ಎರಚಿ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕ ಬಂದ್ – ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ
Advertisement
Advertisement
ಯುವತಿ ಗಂಭೀರ ಸ್ಥಿತಿಯಲ್ಲಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗೆ ಉನ್ನತ ಆಸ್ಪತ್ರೆಗೆ ಆಕೆಯನ್ನು ರವಾನಿಸಲಾಗಿದೆ. ಆಕೆಗೆ ಬೇಕಾದ ಚಿಕಿತ್ಸೆಯನ್ನು ನೀಡಲು ಅಗತ್ಯ ನೆರವು ನೀಡಲಾಗುವುದು. ಅಲ್ಲದೇ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
Advertisement
ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ತಾಯಿ ಮತ್ತು ಸಹೋದರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರ ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣದ ವಿಚಾರವಾಗಿ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಹಾಪುರ್‍ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜ್‍ಕುಮಾರ್ ಅಗರ್ವಾಲ್ ಹೇಳಿದ್ದಾರೆ. ಇದನ್ನೂ ಓದಿ: ಕನ್ನಡ ಹೋರಾಟಗಾರರು ಗೂಂಡಾಗಳಲ್ಲ, ಬಸ್‍ಗಳಿಗೆ ಬೆಂಕಿ ಹಾಕಿಲ್ಲ: ಪ್ರವೀಣ್ ಶೆಟ್ಟಿ ಕಿಡಿ
Web Stories