ಮುಂಬೈ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಿ ಮನೆಗೆ ಹಿಂದಿರುಗಲು ಗ್ರಾಮದಿಂದ 7 ಕಿಮೀ ನಡೆದುಕೊಂಡು (Walk) ಬರುತ್ತಿದ್ದ ಗರ್ಭಿಣಿಯೊಬ್ಬಳು (Pregnant) ಸೂರ್ಯನ ಶಾಖಕ್ಕೆ (Heat Stroke) ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದಲ್ಲಿ (Maharashtra) ನಡೆದಿದೆ.
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ದಹಾನು ತಾಲೂಕಿನ ಓಸರ್ ವೀರ ಗ್ರಾಮದ ಸೋನಾಲಿ ವಾಘಾಟ್ ಸಾವನ್ನಪ್ಪಿದ ಮಹಿಳೆ. ಈಕೆ 3.5 ಕಿ.ಮೀ ನಡೆದು ಅಲ್ಲಿಂದ ಆಟೋದಲ್ಲಿ ಪ್ರಾಥಮಿಕ ಕೇಂದ್ರಕ್ಕೆ ತೆರಳಿದ್ದಾಳೆ.
Advertisement
Advertisement
9ನೇ ತಿಂಗಳಿನಲ್ಲಿದ್ದ ಮಹಿಳೆಗೆ ಪ್ರಾಥಮಿಕ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಿದ್ದಾರೆ. ಈ ವೇಳೆ ಆಕೆ ಬಿಸಿಲಿನಲ್ಲಿ 3.5 ಕಿಮೀ ಪುನಃ ನಡೆದುಕೊಂಡು ಬಂದಿದ್ದಾಳೆ. ಇದನ್ನೂ ಓದಿ: 12 ವಿದ್ಯಾರ್ಥಿನಿಯರಿಗೆ ಕಿರುಕುಳ – ಶಿಕ್ಷಕ ಅರೆಸ್ಟ್
Advertisement
Advertisement
ಅದಾದ ಬಳಿಕ ಸಂಜೆಯ ನಂತರ ಸೋನಾಲಿಗೆ ಅನಾರೋಗ್ಯ ಕಾಡಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಬಿಸಿಲಿನ ಶಾಖದಿಂದಾಗಿ ಆಕೆಗೆ ಅನಾರೋಗ್ಯ ಉಂಟಾಗಿದೆ ಎಂದು ದೃಢಪಡಿಸಿದ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಜೊತೆಗೆ ಹೊಟ್ಟೆಯಲ್ಲಿರುವ ಮಗುವು ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಹಣವಿಲ್ಲದ್ದಕ್ಕೆ 5 ತಿಂಗಳ ಮಗುವಿನ ಶವವನ್ನು ಬ್ಯಾಗ್‍ನಲ್ಲಿ ತುಂಬಿಕೊಂಡು ಬಸ್‍ನಲ್ಲೇ ಕ್ರಮಿಸಿದ ತಂದೆ