ಯಾದಗಿರಿ: ಹೊಟ್ಟೆಯಲ್ಲೇ ಮಗು ಸಹಿತ ಗರ್ಭಿಣಿ ಸಾವಿಗೀಡಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಹೆರಿಗೆ ಮಾಡಿಕೊಳ್ಳದೇ ವೈದ್ಯರು ನಿರ್ಲಕ್ಷ್ಯ ತೋರಿದ್ದಾರೆಂದು ಮೃತ ಮಹಿಳೆ ಕುಟುಂಬಸ್ಥರು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.
ಯಾದಗಿರಿಯ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ಈ ಘಟನೆ ವರದಿಯಾಗಿದೆ. ಗೂಡೂರು ಗ್ರಾಮದ ಸಂಗೀತಾ (20) ಮೃತ ಗರ್ಭಿಣಿ. 3ನೇ ತಾರೀಖು ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದರು. ಪ್ರತೀ ತಿಂಗಳು ಆರೋಗ್ಯ ತಪಾಸಣೆ ಮಾಡಿಸಿದ್ದರಿಂದ ಆರೋಗ್ಯವಾಗಿದ್ದರು. ದಿನ ತುಂಬಿದ್ದರಿಂದ ಯಾವುದೇ ಸಮಸ್ಯೆ ಇಲ್ಲ, ನಾರ್ಮಲ್ ಹೆರಿಗೆ ಮಾಡುವುದಾಗಿ ವೈದ್ಯರು ಹೇಳಿದ್ದರು. ಆಸ್ಪತ್ರೆಗೆ ದಾಖಲಾಗಿದ್ದರೂ ಸ್ಕ್ಯಾನ್ ಮಾಡದೇ ನಿರ್ಲಕ್ಷ್ಯ ವಹಿಸಿದ್ದರು ಎಂದು ಕುಟುಂಬದವರು ದೂರಿದ್ದಾರೆ. ಇದನ್ನೂ ಓದಿ: KSRTC ಬಸ್ ಡಿಕ್ಕಿ- ಕಾರಿನಲ್ಲಿದ್ದ ಮೂವರ ದುರ್ಮರಣ
Advertisement
Advertisement
ಇಡೀ ದಿನ ಆರೋಗ್ಯವಾಗಿ, ಆ್ಯಕ್ಟೀವ್ ಆಗಿ ಸಂಗೀತಾ ಇದ್ದಳು. ಆದರೆ ಸಂಜೆ ಏಕಾಏಕೀ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿ, ಆಸ್ಪತ್ರೆ ಮುಂದೆ ಅಂಬುಲೆನ್ಸ್‌ನಲ್ಲೇ ಶವ ಇಟ್ಟು ಪ್ರತಿಭಟನೆ ನಡೆಸಿದ್ದಾರೆ.
Advertisement
Advertisement
ಯಾದಗಿರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಕೇರಳದ ಮೊದಲ ಸಲಿಂಗಿ ಬಾಡಿಬಿಲ್ಡರ್ ಆತ್ಮಹತ್ಯೆ