ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ವಾಸಿಸುವ ಯುವಜನತೆಯಲ್ಲಿ ಲಿವಿಂಗ್ ಟುಗೆದರ್ ರಿಲೇಶನ್ ಶಿಪ್ ಹೆಚ್ಚಾಗುತ್ತಿದೆ. ಬೆಂಗಳೂರಿನಂಥ ದೊಡ್ಡ ದೊಡ್ಡ ನಗರಗಳಲ್ಲಿ ವಾಸಿಸುವ ಅದರಲ್ಲೂ ಐಟಿ, ಬಿಟಿ ಕಂಪನಿಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಲ್ಲಿ ಇದು ಹೆಚ್ಚಾಗಿ ಕಂಡುಬರುತ್ತಿದೆ. ವಯಸ್ಸಿಗೆ ಬಂದ ಯುವಕ, ಯುವತಿಯರು ಮದುವೆ ಮಾಡಿಕೊಳ್ಳದೆ ಒಂದೇ ಮನೆಯಲ್ಲಿ ಅನ್ಯೋನ್ಯತೆಯಿಂದ ವಾಸವಾಗಿರುವ ಸಂಬಂಧವನ್ನು ಈ ರೀತಿ ಕರೆಯಲಾಗುತ್ತದೆ. ಇಂಥದೇ ಸಂಬಂಧದ ಮೇಲೆ ಹೆಣೆಯಲಾದಂಥ ಕಥೆಯಿರುವ ಚಿತ್ರವೊಂದು ರೆಡಿಯಾಗಿದೆ. ಆ ಚಿತ್ರಕ್ಕೆ ‘ಪ್ರೇಮಿಗಳ ಗಮನಕ್ಕೆ’ (Premigala Gamanakke) ಎಂದು ಹೆಸರಿಡಲಾಗಿದೆ.
Advertisement
ವಿನ್ಸೆಂಟ್ ಇನ್ಬರಾಜ್ (Vincent Inbaraj) ಅವರು ಈ ಚಿತ್ರದ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅರುಳ್ ಸೆಲ್ವನ್ ಅವರ ಛಾಯಾಗ್ರಹಣ, ಡೆನ್ನಿಸ್ ವಲ್ಲಭನ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಚಿತ್ರದ ಸಹ ನಿರ್ದೇಶಕರಾಗಿ ಕೃಷ್ಣ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೆ ಸಿಟಾಡಿಲ್ ಫಿಲಂಸ್ ಮೂಲಕ ಸುಬ್ಬು ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದನ್ನೂ ಓದಿ: ತೆಲುಗು ನಟ ನಾಗಬಾಬು ಪುತ್ರಿ ನಿಹಾರಿಕಾ ದಾಂಪತ್ಯದಲ್ಲಿ ಬಿರುಕು
Advertisement
Advertisement
ಕೊರೋನಾ ಸಂದರ್ಭದಲ್ಲಿ ಇಡೀ ದೇಶವೇ ಲಾಕ್‌ಡೌನ್ ಆಗಿ ಹೊರಗಡೆ ಎಲ್ಲೂ ಹೋಗದಂಥ ಸಂದರ್ಭದಲ್ಲಿ ಬೆಂಗಳೂರಿನ ಎಲ್ಲಾ ಐಟಿ, ಬಿಟಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಗಳಿಂದಲೇ ಕೆಲಸ ಮಾಡುವ ಅವಕಾಶವನ್ನು ಕಲ್ಪಿಸಿಕೊಟ್ಟವು. ಅದರಂತೆ ಕಂಪನಿ ಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈ ಚಿತ್ರದ ನಾಯಕ, ನಾಯಕಿ ಇಬ್ಬರೂ ಒಂದೇ ಮನೆಯಲ್ಲಿ ವಾಸಿಸತೊಡಗುತ್ತಾರೆ. ಆಗ ಅವರಿಗೆ ಎದುರಾಗುವ ಸಂದರ್ಭಗಳನ್ನು ಹೇಗೆ ಫೇಸ್ ಮಾಡಿದರು ಎಂಬುದರ ಕುರಿತು ಈ ಚಿತ್ರದಲ್ಲಿ ಹೇಳಲಾಗಿದೆ.
Advertisement
ಈ ಚಿತ್ರದ 2 ಹಾಡು ಹಾಗೂ ಮಾತಿನ ಭಾಗದ ಚಿತ್ರೀಕರಣವನ್ನು ಬೆಂಗಳೂರಿನ ಉತ್ತರಹಳ್ಳಿಯ ಶೂಟಿಂಗ್ ಮನೆಯಲ್ಲಿ ನಡೆಸಲಾಗಿದೆ. ಉಳಿದ ಹಾಡಿನ ಚಿತ್ರೀಕರಣವನ್ನು ಮಂಗಳೂರಲ್ಲಿ ನಡೆಸೋ ಯೋಜನೆಯಿದೆ, ಕನ್ನಡ ಬಿಗ್ ಬಾಸ್ ಖ್ಯಾತಿಯ ಶಶಿ (Shashi) ಈ ಚಿತ್ರದ ನಾಯಕನಾಗಿ ಕಾಣಿಸಿಕೊಂಡಿದ್ದು, ಈಗಾಗಲೇ ಕೆಲ ಚಿತ್ರಗಳಲ್ಲಿ ನಟಿಸಿರುವ ಚಿರಶ್ರೀ (Chirashri) ನಾಯಕಿಯ ಪಾತ್ರವನ್ನು ನಿರ್ವಹಿಸಿದ್ದಾರೆ, ಸುಬ್ಬು ಮುಂತಾದವರು ತಾರಾಗಣದಲ್ಲಿದ್ದಾರೆ.