ವಿಜಯಪುರ: ನಡೆದಾಡುವ ದೇವರು ಎಂದೇ ಪ್ರಸಿದ್ಧರಾಗಿರುವ ಸಿದ್ದೇಶ್ವರ ಶ್ರೀ (Siddeshwara Sri) ಗಳ ಅಂತ್ಯಸಂಸ್ಕಾರಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ.
ವಿಜಯಪುರ (Vijayapura) ದ ಜ್ಞಾನಯೋಗಾಶ್ರಮದಲ್ಲಿ ಅಂತ್ಯಸಂಸ್ಕಾರಕ್ಕೆ ಜಿಲ್ಲಾಡಳಿತದಿಂದ ಸರ್ವ ಸಿದ್ಧತೆ ನಡೆಸಲಾಗುತ್ತಿದೆ. ಶ್ರೀಗಳ ಇಚ್ಛೆಯಂತೆ ಅವರು ಮಾಡಿದ ವಿಲ್ ಪ್ರಕಾರ ಅಗ್ನಿ ಸ್ಪರ್ಷ ಮಾಡಿ ಅಂತ್ಯಸಂಸ್ಕಾರ (Funeral) ನೆರವೇರಿಸಲಾಗುತ್ತಿದೆ. ಇದನ್ನೂ ಓದಿ: ಶ್ರೀಗಳು ವಿಲ್‍ನಲ್ಲಿ ಬರೆದಿಟ್ಟಿರುವಂತೆ ಅಂತ್ಯಸಂಸ್ಕಾರ ಮಾಡಲಾಗುವುದು: ಯತ್ನಾಳ್
ಅಂತ್ಯಸಂಸ್ಕಾರದ ಕಟ್ಟೆ ಕಾಮಗಾರಿ ನಡೆಯುತ್ತಿದ್ದು, ಅಂತ್ಯಸಂಸ್ಕಾರಕ್ಕೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ. ಕೇವಲ ಕುಟುಂಬಸ್ಥರು, ಗಣ್ಯರು, ಸ್ವಾಮೀಜಿಗಳಿಗೆ ಮಾತ್ರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗುತ್ತದೆ. ಅಂತ್ಯಸಂಸ್ಕಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೊಶಿ ಸೇರಿದಂತೆ ಅನೇಕ ಸಚಿವರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ನಮ್ಮನೆಯಲ್ಲಿ ಕುರಾನ್ ಜೊತೆಗೆ ಶ್ರೀಗಳ ಆಶೀರ್ವಚನ ಕೇಳುತ್ತಿದ್ದೆವು: ಮುಸ್ಲಿಂ ಭಕ್ತರು
ಗಣ್ಯರಿಗೆ 500 ಆಸನ, ಸ್ವಾಮಿಜಿಗಳಿಗೆ 150 ಆಸನ ಹಾಗೂ ಕುಟುಂಬಸ್ಥರಿಗೆ 100 ಆಸನಗಳ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. 3 ಗಂಟೆಗೆ ಅಂತಿಮ ದರ್ಶನ ಪುರ್ಣಗೊಳಿಸಿ ನಗರದ ಪ್ರಮುಖ ಬೀದಿಗಳಲ್ಲಿ ಪಾದಾಯಾತ್ರೆ ಮೂಲಕ ಪಾರ್ಥಿವ ಶರೀರ ಆಶ್ರಮಕ್ಕೆ ಬರಲಿದೆ. ಸಂಜೆ 5 ಗಂಟೆ ಸುಮಾರಿಗೆ ಅಂತ್ಯಸಂಸ್ಕಾರ ನಡೆಸಲಾಗುತ್ತದೆ. ಸುತ್ತೂರು ಶ್ರೀ ಗಳು ಅಂತ್ಯಸಂಸ್ಕಾರದ ಬಗ್ಗೆ ಮಾಹಿತಿ ಪಡೆದಿದ್ದಾರೆ.