ಬೆಂಗಳೂರು: ಹಳೇ ಮೈಸೂರು ಭಾಗದ ರಾಮನಗರದಿಂದ (Ramanagara) ಈ ಬಾರಿ ಹಿಂದುತ್ವದ ಬಲವಾದ ಗಾಳಿ ಬೀಸುವುದು ಫಿಕ್ಸ್ ಆದಂತಿದೆ. ರಾಮನಗರದ ರಾಮದೇವರ ಬೆಟ್ಟದಲ್ಲಿ (Ramadevara Betta) ರಾಮಮಂದಿರ ನಿರ್ಮಾಣ ಸಂಬಂಧ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ.
ರಾಮದೇವರ ಬೆಟ್ಟದಲ್ಲಿ ಭವ್ಯ ರಾಮಮಂದಿರ (Ram Mandir) ನಿರ್ಮಾಣಕ್ಕೆ ಸರ್ಕಾರ ಸಮಗ್ರ ಯೋಜನಾ ವರದಿ ಸಿದ್ಧಪಡಿಸುತ್ತಿದೆ. ಬಜೆಟ್‌ನಲ್ಲಿ (Karnataka Budget 2023) ರಾಮಮಂದಿರ ನಿರ್ಮಾಣ ಘೋಷಣೆ ಮಾಡಿದ್ದ ಸರ್ಕಾರ, ಸಮಗ್ರ ಯೋಜನಾ ವರದಿ ಸಿದ್ಧಪಡಿಸಲು 50 ಕೋಟಿ ರೂ. ಅನುದಾನ ಬಿಡುಗಡೆಗೆ ಮುಂದಾಗಿದೆ.
Advertisement
Advertisement
ಅಯೋಧ್ಯೆ ಮಾದರಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪ್ರಾಥಮಿಕವಾಗಿ 50 ಕೋಟಿ ರೂ. ಬಿಡುಗಡೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮುಖ್ಯಮಂತ್ರಿಯವರ ಅನುಮತಿಯಷ್ಟೇ ಬಾಕಿಯಿದೆ.
Advertisement
ಅಯೋಧ್ಯೆಯ ರಾಮಮಂದಿರ ಮಾದರಿಯಲ್ಲಿ 19 ಎಕರೆ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕೆ ನೀಲನಕ್ಷೆ ರೂಪಿಸಲಾಗಿದೆ. ಮೊದಲ ಹಂತದಲ್ಲಿ 50 ಕೋಟಿ ರೂ. ವೆಚ್ಚ ಮಾಡಲಾಗ್ತಿದೆ. ಏಸ್ತೆಟಿಕ್ ಆರ್ಕಿಟೆಕ್ಸ್ನ ಖ್ಯಾತ ವಾಸ್ತುಶಿಲ್ಪಿ ಯಶಸ್ವಿನಿ ಶರ್ಮಾ ನೇತೃತ್ವದ ತಂಡ ರಾಮಮಂದಿರದ ವಿನ್ಯಾಸ ಸಿದ್ಧಪಡಿಸುತ್ತಿದೆ. ಇದನ್ನೂ ಓದಿ: ಡ್ರಗ್ಸ್ ದಂಧೆ ಕೇಸ್ – ಮಣಿಪಾಲ ವಿವಿಯ 42 ವಿದ್ಯಾರ್ಥಿಗಳು ಅಮಾನತು
Advertisement
ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ (Ashwath Narayan) ಈ ಸಂಬಂಧ ಅಧಿಕಾರಿಗಳೊಂದಿಗೆ ಮೂರು ಸುತ್ತಿನ ಸಭೆ ನಡೆಸಿದ್ದು, ಸಾರ್ವಜನಿಕರಿಂದಲೂ ದೇಣಿಗೆ ಅಥವಾ ಅಗತ್ಯ ಸಾಮಗ್ರಿ ಸಂಗ್ರಹದ ಬಗ್ಗೆಯೂ ಚರ್ಚಿಸಿದ್ದಾರೆ.
ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗೋದಕ್ಕೂ ಮುನ್ನವೇ ಮಾರ್ಚ್ 3ನೇ ವಾರದಲ್ಲಿ ರಾಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನಡೆಯಲಿದೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮೂಲಕ ಶಿಲಾನ್ಯಾಸಕ್ಕೆ ಪ್ಲಾನ್ ಮಾಡಲಾಗಿದೆ. ಇದನ್ನೂ ಓದಿ: 2 ಪಕ್ಷಗಳಿಂದ ರಾಜ್ಯದಲ್ಲಿ ಭ್ರಷ್ಟಾಚಾರ ನಡೀತಿದೆ: ಸಂಡೂರಿನಲ್ಲಿ ಚಾಣಕ್ಯ ಕಿಡಿ
ರಾಮಮಂದಿರದ ಜತೆಗೆ ಶ್ರೀರಾಮ ದ್ವಾರಾ, ರಾಮಮಂದಿರ ಪೆವಿಲಿಯನ್, ಅಶೋಕವನ, ಶ್ರೀರಾಮ ಪಥ ಮ್ಯೂಸಿಯಂ, ಜಟಾಯು ಗ್ಯಾಲರಿ ನಿರ್ಮಿಸಲು ಉದ್ದೇಶಿಸಲಾಗಿದೆ.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k