ಮಂಡ್ಯ: ಇಲ್ಲಿನ ಕೆರಗೋಡು (Keragodu) ಹನುಮಧ್ವಜ (Hanuma Flag) ತೆರವು ಪ್ರಕರಣ ಅಯೋಧ್ಯೆಯ ಅಂಗಳದಲ್ಲಿ ಸದ್ದು ಮಾಡಿದೆ. ಹಿಂದೂ ಕಾರ್ಯಕರ್ತರು ಅಯೋಧ್ಯೆಯ ಬಾಲರಾಮನ ದರ್ಶನ ಪಡೆದು, ಮತ್ತೆ ಹನುಮಧ್ವಜ ಹಾರಿಸುತ್ತೇವೆ ಎಂದು ದೇವಾಲಯದ ಆವರಣದಲ್ಲಿ ಘೋಷಣೆ ಕೂಗಿದ್ದಾರೆ.
ಹನುಮಧ್ವಜ ವಿವಾದದ ಬಳಿಕ ಕೆರಗೋಡು ಗ್ರಾಮಸ್ಥರು ಹಾಗೂ ಹಿಂದೂ ಕಾರ್ಯಕರ್ತರು ಅಯೋಧ್ಯೆ ಪ್ರವಾಸಕ್ಕೆ ತೆರಳಿದ್ದಾರೆ. ಈ ವೇಳೆ ಶ್ರೀರಾಮನ ದರ್ಶನ ಪಡೆದ ಗ್ರಾಮಸ್ಥರು ಶ್ರೀರಾಮನ ಸನ್ನಿಧಿಯಲ್ಲಿ ನಿಂತು ಹನುಮಧ್ವಜ ಹಾರಿಸುವ ಘೋಷಣೆ ಕೂಗಿದ್ದಾರೆ. ಈ ಮೂಲಕ ಕೆರಗೋಡಿನಲ್ಲಿ ಮತ್ತೆ ಹನುಮಧ್ವಜ ಹಾರಿಸಲು ಗ್ರಾಮಸ್ಥರು ಪಣ ತೊಟ್ಟಿದ್ದಾರೆ. ಇದನ್ನೂ ಓದಿ: ರಾಮನಗರ ವಕೀಲರ ಹೋರಾಟಕ್ಕೆ ಕೊನೆಗೂ ಮಣಿದ ಸರ್ಕಾರ – ಐಜೂರು ಠಾಣೆಯ ಪಿಎಸ್ಐ ಅಮಾನತು
Advertisement
Advertisement
ರಾಷ್ಟ್ರಧ್ವಜ ಹಾರಿಸಲು ಅನುಮತಿ ಪಡೆದು 108 ಅಡಿ ಎತ್ತರದಲ್ಲಿ ಹನುಮಧ್ವಜ ಹಾರಿಸಿದ್ದಕ್ಕೆ ಆ ಧ್ವಜವನ್ನು ಪೊಲೀಸರು ಕೆಳಗಿಳಿಸಿದ್ದರು. ಹನುಮಧ್ವಜ ಇಳಿಸಿದ್ದಕ್ಕೆ ಗ್ರಾಮದಲ್ಲಿ ಪ್ರತಿಭಟನೆ ಸಹ ನಡೆದಿತ್ತು. ಹನುಮಧ್ವಜ ಹಾರಿಸಲು ಅವಕಾಶ ನೀಡಬೇಕು ಎಂದು ಗ್ರಾಮಸ್ಥರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು.
Advertisement
Advertisement
ಇದೇ ವಿಚಾರವಾಗಿ ಬಿಜೆಪಿ (BJP) ಹಾಗೂ ಜೆಡಿಎಸ್ (JDS) ನಾಯಕರು ಕಾಂಗ್ರೆಸ್ (Congress) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಹಿಂದೂ ಸಂಘಟನೆಗಳು ಮಂಡ್ಯ (Mandya) ಬಂದ್ ಸಹ ಮಾಡಿ ಜಿಲ್ಲಾಡಳಿತಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದರು. ಇದೀಗ ಮತ್ತೆ ಕೆರಗೋಡು ಗ್ರಾಮಸ್ಥರು ರಾಮನ ಸನ್ನಿಧಿಯಲ್ಲಿ ನಿಂತು ಕೆರಗೋಡಲ್ಲಿ ಹನುಮ ಧ್ವಜ ಹಾರಿಸುವ ಪಣ ತೊಟ್ಟಿದ್ದಾರೆ. ಇದನ್ನೂ ಓದಿ: ಸುಪ್ರೀಂ ಕೋರ್ಟ್ ಖ್ಯಾತ ವಕೀಲ ಫಾಲಿ ನಾರಿಮನ್ ನಿಧನ