ನವದೆಹಲಿ: ಗಣರಾಜ್ಯೋತ್ಸವ ಆಚರಣೆಗೆ ಈಗ ದಿನಗಣನೆ ಶುರುವಾಗಿದೆ. ದೇಶದ ಹಬ್ಬಕ್ಕೆ ದೆಹಲಿಯ ರಾಜಪಥ ರಸ್ತೆ ಸಿಂಗಾರಗೊಳ್ಳುತ್ತಿದ್ದು, ಈ ಬಾರಿ ನಡೆಯಲಿರುವ ಟ್ಯಾಬ್ಲೊ ಪರೇಡ್ ಗಳಲ್ಲಿ ಗಾಂಧಿಯ ಶಾಂತಿ ಮಂತ್ರ ಪಠಣವಾಗಲಿದೆ.
ದೇಶದ ಹಬ್ಬದ ಆಚರಣೆಗೆ ತಾಲೀಮು ಶುರುವಾಗಿದೆ. ಒಂದು ಕಡೆ ರಾಜಪಥ್ ರಸ್ತೆ ಸಿಂಗಾರಗೊಳ್ಳುತ್ತಿದರೆ, ಮತ್ತೊಂದು ಕಡೆ ದೇಶದ ಕಣ್ಮನ ಸೆಳೆಯಲು ಸ್ತಬ್ಧಚಿತ್ರಗಳು ತಯಾರಾಗುತ್ತಿವೆ. ಮಹಾತ್ಮ ಗಾಂಧೀಜಿ ಅವರ 150 ಜನ್ಮ ದಿನದ ಹಿನ್ನೆಲೆ ಈ ಬಾರಿಯ ಗಣರಾಜ್ಯೋತ್ಸವ ವಿಶೇಷವಾಗಿ ಆಚರಿಸಲು ತೀರ್ಮಾನಿಸಲಾಗಿದ್ದು, ಟ್ಯಾಬ್ಲೋ ಮೂಲಕ ಮಹಾತ್ಮ ಗಾಂಧಿಗೆ ವಿಶೇಷ ಗೌರವ ಸರ್ಮಪಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
Advertisement
Advertisement
ಪರೇಡ್ ನಲ್ಲಿ 17 ರಾಜ್ಯಗಳು ಭಾಗವಹಿಸುತ್ತಿದ್ದು, ಭಾಗವಹಿಸುತ್ತಿರುವ ಎಲ್ಲಾ ರಾಜ್ಯಗಳಿಗೂ ಮಹಾತ್ಮ ಗಾಂಧಿ ವಸ್ತು ವಿಷಯ ಆಧರಿಸಿ ಪ್ರತಿ ರಾಜ್ಯದಲ್ಲಿ ಗಾಂಧಿ ಬಿಟ್ಟು ಹೋಗಿರುವ ನೆನಪುಗಳು ಆಯ್ದು ಸ್ತಬ್ಧ ಚಿತ್ರಗಳನ್ನು ರಚನೆ ಮಾಡಲಾಗುತ್ತಿದೆ.
Advertisement
ಕರ್ನಾಟಕದಿಂದಲೂ ಸ್ತಬ್ದಚಿತ್ರ ಪ್ರದರ್ಶನಕ್ಕೆ ಭರ್ಜರಿ ತಯಾರಿ ನಡೆದಿದೆ. ಸತತ ಹತ್ತು ವರ್ಷಗಳು ರಾಜಪಥ್ ರಸ್ತೆಯಲ್ಲಿ ಕರ್ನಾಟಕದ ತೇರು ಓಡಿಸಲು ಅವಕಾಶ ಸಿಕ್ಕಿದ್ದು ಈ ಬಾರಿಯೂ ರಾಜ್ಯದ ಸಂಸ್ಕೃತಿ ಅನಾವರಣಗೊಳ್ಳಲಿದೆ. 1924ರಲ್ಲಿ ಮೊದಲ ಬಾರಿ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್‍ನ 39ನೇ ಬೆಳಗಾವಿ ಅಧಿವೇಶನದ ಕಥಾವಸ್ತುವನ್ನು ಕರ್ನಾಟಕ ಆಯ್ಕೆ ಮಾಡಿದ್ದು, ಕಲಾ ನಿರ್ದೇಶಕ ಶಶಿಧರ್ ಹಡಪಾ ನೇತೃತ್ವದಲ್ಲಿ 50 ಮಂದಿ ಕಲಾವಿದರು ರಚಿಸಿರುವ ರಾಜ್ಯದ ಸ್ತಬ್ಧ ಚಿತ್ರ ಕಣ್ಮನ ಸೆಳೆಯುತ್ತಿದೆ.
Advertisement
ಸ್ತಬ್ಧ ಚಿತ್ರದ ವಿಶೇಷತೆ ಏನು?
1924ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನ ಚಿತ್ರಣ ಟ್ಯಾಬ್ಲೊ ನಿರ್ಮಾಣಕ್ಕೆ ಆಯ್ಕೆ ಮಾಡಿದ್ದು ಅಧಿವೇಶನದಲ್ಲಿ ಗಾಂಧಿ ಮಾಡಿದ ಭಾಷಣದ ವೇದಿಕೆ ಮತ್ತು ವೇದಿಕೆಯ ಸುತ್ತ ಬಸವಣ್ಣ ಮತ್ತು ಕೃಷ್ಣರಾಜ ಒಡೆಯರ್ ಫೋಟೋಗಳು ಇರಲಿದೆ.
ಅಧಿವೇಶನದಲ್ಲಿ ಸರೋಜಿನಿ ನಾಯ್ಡು, ಜವಾಹರ ಲಾಲ್ ನೆಹರು, ಸರ್ದಾರ್ ವಲ್ಲಭಬಾಯ್ ಪಟೇಲರಿಂದ ಧ್ವಜರೋಹಣ, ಸ್ವತಂತ್ರ ಪೂರ್ವ ಮೊಟ್ಟಮೊದಲ ಕಲ್ಪನಾ ಧ್ವಜ ಹಾಗೂ ಬದಲಾವಣೆಗಳ ಚಿತ್ರಣ, ಹಿಂದೂ ಮುಸ್ಲಿಂ ಏಕತೆ, ವಿದೇಶಿ ವಸ್ತುಗಳ ಬಹಿಷ್ಕಾರ, ಖಾದಿಗೆ ಪ್ರೋತ್ಸಾಹ ಅಸ್ಪೃಶ್ಯತೆ ನಿವಾರಣೆ ಧ್ಯೆಯವಾಕ್ಯಗಳು ಇರಲಿವೆ.
ಮೊದಲ ಬಾರಿಗೆ ರಾಜಪಥದಲ್ಲಿ ಕನ್ನಡದ ಹಾಡು ಕೇಳಿಸಲಿದ್ದು, ಗಾಂಧಿ ನೆನಪಿಗೆ ಹಿನ್ನೆಲೆ ಧ್ವನಿಯಾಗಿ ಹುಯಿಲಗೋಳ ನಾರಾಯಣ ರಾವ್ ರಚನೆಯ `ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡಿದು’ ಹಾಡು ಕೇಳಲಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv