– ಶ್ರೀರಂಗಪಟ್ಟಣದ ಟಿಪ್ಪು ಸಮಾಧಿಗೆ ಶಾಸಕ ತನ್ವೀರ್ ಸೇಠ್ ನಮನ
ಮಂಡ್ಯ: ಇಂದು ಟಿಪ್ಪು ಜಯಂತಿ (Tippu Jayanti) ಆಚರಣೆಗೆ ಸಿದ್ಧತೆ ಹಿನ್ನೆಲೆ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆ ನಡುವೆಯೂ ವಿವಿಧ ಸಂಘಟನೆಗಳಿಂದ ಟಿಪ್ಪು ಜಯಂತಿ ನಡೆಸಲು ನಿರ್ಧಾರಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರ ಆಸ್ತಿ ಪಾಸ್ತಿ, ಪ್ರಾಣ ರಕ್ಷಣೆಗಾಗಿ 144 ಸೆಕ್ಷನ್ ಜಾರಿ ಮಾಡಿದ್ದು, ಶ್ರೀರಂಗಪಟ್ಟಣ ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ಆದೇಶ ನೀಡಿದ್ದಾರೆ.
Advertisement
ಮೈಸೂರು (Mysuru) ಸೇರಿದಂತೆ ಹಲವೆಡೆಯಿಂದ ಜನ ಸೇರುವ ಸಾಧ್ಯತೆ ಇದ್ದು, ಸೂಕ್ಷ್ಮ ಪ್ರದೇಶವಾಗಿರುವ ಶ್ರೀರಂಪಟ್ಟಣದಲ್ಲಿ ಕಾರ್ಯಕ್ರಮಕ್ಕೆ ನಿರ್ಬಂಧ ಹೂಡಲಾಗಿದೆ. ಜಾಮಿಯಾ ಮಸೀದಿ, ಟಿಪ್ಪು ಮಡಿದ ಸ್ಥಳ, ಟಿಪ್ಪು ಸಮಾಧಿ ಸ್ಥಳ ಸೇರಿ ಪಟ್ಟಣಾದ್ಯಂದ ಪೊಲೀಸ್ ಸರ್ಪಗಾವಲಿದೆ. ಇಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿದ್ದು, ಮೆರವಣಿಗೆ, ಪ್ರತಿಭಟನೆ, ರ‍್ಯಾಲಿಗಳಿಗೆ ನಿರ್ಬಂಧಿಸಲಾಗಿದೆ. ಇದನ್ನೂ ಓದಿ: 400ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಖ್ಯಾತ ನಟ ಡೆಲ್ಲಿ ಗಣೇಶ್ ನಿಧನ
Advertisement
Advertisement
ಬ್ಯಾನರ್, ಬಂಟಿಂಗ್ಸ್, ಧ್ವನಿವರ್ಧಕ, ಪಟಾಕಿ, ಡಿಜೆ ಬಳಕೆಗೂ ನಿಷೇಧಿಸಲಾಗಿದೆ. ಘೋಷಣೆ ಕೂಗದಂತೆ, ಪ್ರಜೋಧನಕಾರಿ ಚಿತ್ರವಿರುವ ಟೀ ಶರ್ಟ್ ಧರಿಸದಂತೆಯೂ ಆದೇಶ ಮಾಡಲಾಗಿದೆ. ಟಿಪ್ಪು ಸಮಾಧಿ ಸ್ಥಳ ಗುಂಬಜ್ ಬಳಿ ಪೊಲೀಸ್ ಬಂದೋಬಸ್ತ್ ಮಾಡಿ ಗೇಟ್ ಬಳಿ ಬ್ಯಾರಿಕೇಟ್ ಹಾಕಿ ನಿಗಾ ವಹಿಸಲಾಗಿದೆ. ಮಂಡ್ಯ, ಮೈಸೂರಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುವ ಸಾಧ್ಯತೆ ಇದ್ದು, ಟಿಪ್ಪು ಸಮಾಧಿಗೆ ನಮನ ಸಲ್ಲಿಸಲು ಮುಸ್ಲಿಂ ಸಮುದಾಯದ ಜನರು ಬರುವ ಸಾಧ್ಯತೆ ಇದೆ. ಯಾವುದೇ ಗಲಾಟೆ, ಅಹಿತಕರ ಘಟನೆ ನಡೆಯದಂತೆ ಹಾಗೂ ಪ್ರವಾಸಿಗರ ಮೇಲೂ ಪೊಲೀಸರು ನಿಗಾ ವಹಿಸಿದ್ದಾರೆ. ಇದನ್ನೂ ಓದಿ: ಕೌಟುಂಬಿಕ ಕಲಹ – ಪತ್ನಿಯ ಕತ್ತಿಗೆ ಟವೆಲ್ ಬಿಗಿದು ಹತ್ಯೆಗೈದ ಪಾಪಿ ಪತಿ
Advertisement
ಟಿಪ್ಪು ಜಯಂತಿ ಹಿನ್ನೆಲೆ ಕಾಂಗ್ರೆಸ್ (Congress) ಶಾಸಕ ತನ್ವೀರ್ ಸೇಠ್ ಶ್ರೀರಂಗಪಟ್ಟಣದ ಗುಂಬಜ್‌ನಲ್ಲಿರುವ ಟಿಪ್ಪು ಸಮಾಧಿಗೆ ಬಂದು ನಮನ ಸಲ್ಲಿಸಿದರು. ಟಿಪ್ಪು, ಹೈದರಾಲಿ, ಹೈದರಾಲಿ ಪತ್ನಿ ಫಾತಿಮಾ ಅವರ ಸಮಾಧಿಗೆ ಹೂವಿನ ಚಾದರ್ ಹೊದಿಸಿ, ಸುಗಂಧ ದ್ರವ್ಯ ಹಾಕಿ ಪ್ರಾರ್ಥನೆ ಮಾಡಿದರು. ಶಾಸಕರಿಗೆ ಮುಸ್ಲಿಂ ಸಮುದಾಯದ ಮುಖಂಡರು ಸಾಥ್ ಕೊಟ್ಟರು. ಇದನ್ನೂ ಓದಿ: ಹೊಳೆನರಸೀಪುರ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ `ಗಡ್ಡ’ ಗಲಾಟೆ – ಮುಸ್ಲಿಂ ಯುವಕರಿಗೆ ಗಡ್ಡ ಬೋಳಿಸುವಂತೆ ತಾಕೀತು ಆರೋಪ