– ಸಿಎಂ, ಡಿಸಿಎಂ ರಿಂದ ಉದ್ಘಾಟನೆ
ಬೆಂಗಳೂರು: ಹೆಬ್ಬಾಳ ವಿಸ್ತರಿತ ಫ್ಲೈಓವರ್ (Hebbal Flyover) ಅನ್ನು ನಾಳೆ (ಆ.18) ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಉದ್ಘಾಟಿಸಲಿದ್ದಾರೆ.
700 ಮೀಟರ್ ಉದ್ದದ ಹೆಬ್ಬಾಳ ಪ್ಲೈ ಓವರ್ ಸುಮಾರು 80 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ಈ ಫ್ಲೈಓವರ್ ಕೆ.ಆರ್ ಪುರಂ (KR Puram) ಕಡೆಯಿಂದ ಮೇಖ್ರೀ ಸರ್ಕಲ್‌ವರೆಗೆ (Mekhri Circle) ನಿರ್ಮಾಣ ಮಾಡಲಾಗಿದೆ. ಇದರ ಕಾಮಗಾರಿಯು 2023ರಲ್ಲಿ ಆರಂಭ ಆಗಿದ್ದು, ಒಂದೂವರೆ ವರ್ಷಗಳ ಬಳಿಕ ಫ್ಲೈಓವರ್ ಕಾರ್ಯ ಪೂರ್ಣಗೊಂಡಿದೆ. ಇದನ್ನೂ ಓದಿ: ದರ್ಶನ ಪರ ಅಖಾಡಕ್ಕಿಳಿದ ಪತ್ನಿ ವಿಜಯಲಕ್ಷ್ಮಿ – ಅಭಿಮಾನಿಗಳಿಗೆ ಕೊಟ್ಟ ಸಂದೇಶ ಏನು?
ನಾಳೆ ಬೆಳಗ್ಗೆ 9 ಗಂಟೆಗೆ ಫೈಓವರ್ ಉದ್ಘಾಟನೆ ಆಗಲಿದ್ದು, ಇದೀಗ ಉದ್ಘಾಟನೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಸಿಬ್ಬಂದಿ ಫ್ಲೈಓವರ್ ರ‍್ಯಾಂಪ್‌ಗೆ ಹೂವುಗಳ ಸರಮಾಲೆ ಹಾಕಿ ಸಿದ್ಧತೆ ಮಾಡುತ್ತಿದ್ದಾರೆ. ಈ ಫ್ಲೈಓವರ್‌ನಿಂದ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆ ನಿವಾರಣೆಯಾಗಲಿದೆ.