ಬೆಳಗಾವಿ: ಆಪರೇಷನ್ ಚಿತಾ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ. ಶಿವಮೊಗ್ಗದ ಸಕ್ರೆಬೈಲಿನಿಂದ ಗಜಪಡೆ ಬೆಳಗಾವಿಯತ್ತ ಮುಖಮಾಡಿದೆ. ಸತತ 22 ದಿನಗಳಿಂದ 400ಕ್ಕೂ ಹೆಚ್ಚು ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದರೂ ಈವರೆಗೆ ಚಿರತೆ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಹೊರೆ ತಗ್ಗಿಸಿ, ಚಿರತೆಯನ್ನು ಪತ್ತೆ ಮಾಡಲು ಟ್ರೋಲಿಗರು ಆಧಾರ್ ಕಾರ್ಡ್ ಒಂದನ್ನು ಸಿದ್ಧಪಡಿಸಿದ್ದಾರೆ.
Advertisement
ಈವರೆಗೆ ಚಿರತೆ ಸೆರೆಯಾಗದ ಹಿನ್ನೆಲೆಯಲ್ಲಿ ವಿಭಿನ್ನ ರೀತಿಯ ಪೋಸ್ಟ್ಗಳ ಮೂಲಕ ಟ್ರೋಲಿಗರು ವ್ಯಂಗ್ಯ ಮಾಡಿದ್ದಾರೆ. ಚಿರತೆ ಹೆಸರಿನಲ್ಲಿ ಆಧಾರ್ ಕಾರ್ಡ್ ಸಹ ಸಿದ್ಧಪಡಿಸಿದ್ದಾರೆ. ಬಿಬತ್ಯಾ ಬೇಲ್ಗಾಂವ್‌ಕರ್ ಎಂದು ಚಿರತೆಗೆ ಹೆಸರು ಇಟ್ಟಿದ್ದು, ಈ ಹೆಸರಿನಲ್ಲೇ ಆಧಾರ್ ಕಾರ್ಡ್ ಸಿದ್ಧಪಡಿಸಿದ್ದಾರೆ. ಇದನ್ನೂ ಓದಿ: ನಿಶ್ಚಿತಾರ್ಥ ವರನಿಗೆ ಯುವತಿಯ ಅಶ್ಲೀಲ ಫೋಟೋ ಕಳುಹಿಸಿದ ನೆರೆಮನೆಯವ – ವಧು ಆತ್ಮಹತ್ಯೆ
Advertisement
Advertisement
ಅಲ್ಲದೇ `ಎಷ್ಟು ಬೇಕಾದ್ರೂ ಪ್ರಯತ್ನ ಮಾಡಿ ನಾನು ಗಣಪತಿ ಹಬ್ಬ ಮುಗಿಸಿಕೊಂಡು ಹೋಗ್ತೇನೆ. ಯಾರಪ್ಪಂದೇನ್ ಐತಿ, ಬೆಳಗಾವಿ ನಂದೈತಿ ಬೆಳಗಾವಿ ಬಿಟ್ಟು ಹೋಗಲ್ಲ, ನಾನೇನ್ ಆತಂಕವಾದಿನಾ ನನ್ನ ಹಿಡಿಯಲು ಆನೆ, ನಾಯಿ, ಪೊಲೀಸರು ಬಂದಿದ್ದೀರಿ’ ಎಂದು ಚಿರತೆಯೇ ಹೇಳಿಕೊಂಡಂತೆ ಫೋಟೋಗಳನ್ನ ಹಂಚಿಕೊಂಡಿದ್ದಾರೆ. ಜೊತೆಗೆ ಚಿರತೆಯನ್ನೂ ಸಂದರ್ಶನ ಮಾಡುತ್ತಿರುವ ಫೋಟೋಗಳನ್ನ ಟ್ರೋಲ್ ಮಾಡಲಾಗಿದೆ. ಇದನ್ನೂ ಓದಿ: ಸೋನಾಲಿ ಪೋಗಟ್‌ಗೆ ಪಾರ್ಟಿಯಲ್ಲಿ ಬಲವಂತವಾಗಿ ಡ್ರಗ್ಸ್ ನೀಡಿದ್ವಿ: ತಪ್ಪೊಪ್ಪಿಕೊಂಡ ಆರೋಪಿಗಳು
Advertisement
ನಗರದ ಗಾಲ್ಫ್ ಕ್ಲಬ್‌ನಲ್ಲಿ ಅಡಗಿರುವ ಚಿರತೆ ಪತ್ತೆ ಕಾರ್ಯಾಚರಣೆ 22ನೇ ದಿನಕ್ಕೆ ಕಾಲಿಟ್ಟಿದ್ದು, ಚಿರತೆ ಸೆರೆಗೆ ಶಿವಮೊಗ್ಗದ ಸಕ್ರೆಬೈಲು ಬಿಡಾರದಿಂದ ಎರಡು ಆನೆಗಳನ್ನು ಕರೆ ತರಲಾಗಿದೆ. ಗಾಲ್ಫ್ ಮೈದಾನದ ಒಂದು ಕಿಮೀ ವ್ಯಾಪ್ತಿಯಲ್ಲಿ ಬರುವ 22 ಸರ್ಕಾರಿ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಇಂದು ಕೂಡ ಮುಂದುವರಿಸಲಾಗಿದೆ.
250 ಎಕರೆ ಪ್ರದೇಶದಲ್ಲಿ ಇರುವ ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಅಡಗಿರುವ ಚಿರತೆ ಸೆರೆಗೆ ಇಂದಿನಿಂದ ಎರಡು ಆನೆಗಳನ್ನು ಬಳಸಿಕೊಂಡು ಅರಣ್ಯ ಇಲಾಖೆ ಕಾರ್ಯಾಚರಣೆಗೆ ಮುಂದಾಗಲಿದೆ. ಶಿವಮೊಗ್ಗದ ಸಕ್ರೆಬೈಲ್ ಬಿಡಾರದಿಂದ ಇಂದು ಮಧ್ಯರಾತ್ರಿ ಎರಡು ಆನೆಗಳನ್ನು ಕರೆತರಲಾಗಿದೆ. ಅರ್ಜುನ್ ಮತ್ತು ಆಲೆ ಎನ್ನುವ ಎರಡು ಆನೆಗಳನ್ನು ಬಳಸಿ ಇಂದು ಕೊಂಬಿಂಗ್ ಮಾಡಲಾಗುತ್ತದೆ.