– ಕಲ್ಲು ಗಣಿಗಾರಿಕೆಯಿಂದ ಕೆಆರ್‌ಎಸ್ ಡ್ಯಾಂಗೆ ಅಪಾಯ – ರೈತರ ಆತಂಕ
ಮಂಡ್ಯ: ಬೇಬಿಬೆಟ್ಟದಲ್ಲಿ ಸದ್ದಿಲ್ಲದೇ ಟ್ರಯಲ್ ಬ್ಲಾಸ್ಟ್‌ಗೆ (Bebi Trial Blast) ಸರ್ಕಾರ ಸಿದ್ಧತೆ ನಡೆಸಿದೆ. ಪ್ರಾಯೋಗಿಕ ಪರೀಕ್ಷೆಗೆ ಮುಂದಿನ ವಾರವೇ ವಿಜ್ಞಾನಿಗಳನ್ನು ಕರೆಸಲು ಮುಂದಾಗಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಇದರಿಂದ ರೈತರು (Farmers) ಗರಂ ಆಗಿದ್ದು, ಪ್ರತಿಭಟನೆ ನಡೆಸಿದ್ದಾರೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ, ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಸೇರಿದಂತೆ ಹಲವು ರೈತ ಮುಖಂಡರು, ಕಾರ್ಯಕರ್ತರು ಕೆಆರ್‌ಎಸ್ (KRS) ಬಳಿ ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ರೈತರು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಜಿಲ್ಲೆಯ ಶಾಸಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. `ಟ್ರಯಲ್ ಬ್ಲಾಸ್ಟ್ ಬೇಡ ಬೇಡ’ ಎಂದು ಘೋಷಣೆ ಕೂಗಿದ್ದಾರೆ. ಇದನ್ನೂ ಓದಿ: ಹತ್ರಾಸ್ ದುರಂತ- ಮೃತರ ಕುಟುಂಬಕ್ಕೆ ತಲಾ 2 ಲಕ್ಷ, ಗಾಯಾಳುಗಳಿಗೆ ತಲಾ 50 ಸಾವಿರ ನೆರವು
ಬಳಿಕ ಮಾತನಾಡಿದ ಪ್ರತಿಭಟನಾನಿರತ ರೈತರು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಬಳಿಯ ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯಿಂದ ಕೆಆರ್‌ಎಸ್ ಡ್ಯಾಂಗೆ ಅಪಾಯ ಇದೆ. ಡ್ಯಾಂ ಸುರಕ್ಷತೆ ದೃಷ್ಟಿಯಿಂದ ಸದ್ಯ ಗಣಿಗಾರಿಕೆ ನಿಷೇಧಿಸಲಾಗಿದೆ. ಈಗ ಮತ್ತೆ ಸರ್ಕಾರವೇ ಗಣಿಗಾರಿಕೆಗೆ ಅನುಮತಿ ನೀಡಲು ಮುಂದಾಗಿದೆ. ಅದಕ್ಕಾಗಿ ಟ್ರಯಲ್ ಬ್ಲಾಸ್ಟ್ ನಡೆಸಲು ಸಿದ್ಧತೆ ಮಾಡಿಕೊಂಡಿದೆ. ಟ್ರಯಲ್ ಬ್ಲಾಸ್ಟ್ ಮಾಡಿ ಡ್ಯಾಂಗೆ ಯಾವುದೇ ಅಪಾಯವಿಲ್ಲ ಅಂತ ವರದಿ ತರಿಸಿಕೊಳ್ಳಲು ಹುನ್ನಾರ ನಡೆಸಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಕೆಆರ್‌ಎಸ್ ಡ್ಯಾಮ್ ಮುಖ್ಯದ್ವಾರ, ನೀರಾವರಿ ನಿಯಮದ ಕಚೇರಿ ಬಳಿ 100ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಇದನ್ನೂ ಓದಿ: IPL 2025: ಮೆಗಾ ಹರಾಜು ಪ್ರಕ್ರಿಯೆ ಶುರು; ರಿಟೇನ್ ಆಟಗಾರರ ವಿಚಾರದಲ್ಲಿ ಫ್ರಾಂಚೈಸಿಗಳ ನಡುವೆ ಭಿನ್ನಾಭಿಪ್ರಾಯ!