-ಏಕ್ ದಿನ್ ಕಾ ಸುಲ್ತಾನ್ ಆಗ್ತಾರಾ ನೂತನ ಸಿಎಂ!!
ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿರುವ ಖುಷಿಯಲಿರುವ ಬಿ.ಎಸ್ ಯಡಿಯೂರಪ್ಪ ಅವರಿಗೆ ಇಂದು ಅತ್ಯಂತ ಪ್ರಮುಖ ದಿನ. ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡಿರುವ ರಾಜ್ಯಪಾಲ ವಜುಭಾಯಿ ವಾಲಾರ ನಡೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಮುಂದುವರಿಯಲಿದೆ.
ನ್ಯಾ. ಎ.ಕೆ. ಸಿಕ್ರಿ ನೇತೃತ್ವದ ತ್ರಿ ಸದಸ್ಯ ಪೀಠ ವಿಚಾರಣೆ ಮುಂದುವರಿಸಲಿದ್ದು, ಇಂದು ಮಹತ್ವದ ತೀರ್ಪು ನೀಡಲಿದೆ. ಬುಧವಾರ ರಾತ್ರಿ ಐದು ಗಂಟೆಗಳ ಕಾಲ ದೀರ್ಘ ವಿಚಾರಣೆ ನಡೆಸಿದ್ದ ಪೀಠ ಸಾಂವಿಧಾನಕ ಹುದ್ದೆ ರಾಜ್ಯಪಾಲರ ನಿರ್ಣಯಕ್ಕೆ ಹಸ್ತಕ್ಷೇಪ ಮಾಡದೆ ಪ್ರಮಾಣ ವಚನ ತಡೆ ಒಪ್ಪಿಗೆ ನೀಡಲಿಲ್ಲ. ಬದಲಿಗೆ ರಾಜ್ಯಪಾಲರಿಗೆ ಬಿಎಸ್‍ವೈ ಬರೆದಿರುವ ಪತ್ರದ ಪ್ರತಿಯನ್ನು ಸುಪ್ರಿಂಕೊರ್ಟ್ ಗೆ ಸಲ್ಲಿಸುವಂತೆ ಕೇಳಿತ್ತು.
Advertisement
Advertisement
ರಾಜ್ಯಪಾಲರಿಗೆ ಸರ್ಕಾರ ರಚನೆ ವಿಚಾರವಾಗಿ ಬಿಎಸ್ ಯಡಿಯೂರಪ್ಪ ಬರೆದಿರುವ ಪತ್ರದಲ್ಲಿ ಏನಿದೆ? ಬಹುಮತ ಸಾಬೀತಿಗೆ ಬೇಕಾದ ಬೆಂಬಲ ಯಾರು ನೀಡ್ತಾರೆ? ಎಂಬೆಲ್ಲ ಮಾಹಿತಿ ಆಧರಿಸಿ ವಿಚಾರಣೆ ನಡೆಯಲಿದೆ. ಇದರ ಜೊತೆಗೆ ಹಿರಿಯ ವಕೀಲ ರಾಮ್ ಜೇಠ್ಮಾಲಾನಿ ಕೂಡಾ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿದ್ದು, ಯಾವ ಆಯಾಮದಲ್ಲಿ ವಾದ ಮಂಡಸಿಲಿದ್ದಾರೆ ಎಂಬ ಕುತೂಹಲ ಮೂಡಿದೆ.
Advertisement
ಈ ಎಲ್ಲ ಅರ್ಜಿಯ ಜೊತೆಗೆ ಆಂಗ್ಲೋ ಇಂಡಿಯನ್ ಶಾಸಕರನ್ನು ತರಾತುರಿಯಲ್ಲಿ ರಾಜ್ಯಪಾಲರು ನೇಮಕ ಮಾಡಿದ್ದಾರೆ ಅಂತಾ ಆರೋಪಿಸಿರುವ ಕಾಂಗ್ರೆಸ್ ಜೆಡಿಎಸ್ ಜಂಟಿಯಾಗಿ ಮತ್ತೊಂದು ಅರ್ಜಿಯೊಂದನ್ನ ಸುಪ್ರಿಂಕೊರ್ಟ್ ಗೆ ಸಲ್ಲಿಸಿದ್ದು, ಒಟ್ಟು ನಾಲ್ಕು ಅರ್ಜಿಗಳು ಏಕ ಕಾಲದಲ್ಲಿ ವಿಚಾರಣೆಗೆ ಬರಲಿದ್ದು ಇಂದು ಬಿಎಸ್‍ವೈ ಭವಿಷ್ಯ ನಿರ್ಧರಿಸಲಿವೆ.