ಬೆಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಪ್ರೆಸಿಡೆನ್ಸಿ ಕಾಲೇಜಿನ (Presidency University Bengaluru) ಬಿ.ಟೆಕ್ ವಿದ್ಯಾರ್ಥಿನಿಗೆ (BTech Student) ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಬಳಿಕ ತಾನೂ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಜಾನುಕುಂಟೆ ಠಾಣಾ (Rajanukunte Police Station) ವ್ಯಾಪ್ತಿಯಲ್ಲಿ ನಡೆದಿದೆ.
ನೃಪತುಂಗ ರಸ್ತೆಯಲ್ಲಿರುವ ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಇ ವಿದ್ಯಾರ್ಥಿ ಪವನ್ ಕಲ್ಯಾಣ್ ಕೊಲೆ ಆರೋಪಿ. ಪ್ರೆಸಿಡೆನ್ಸಿ ಕಾಲೇಜಿನ ಲಯಸ್ಮಿತ (19) ಮೃತ ಯುವತಿ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದ್ರೆ ಪ್ರೀತಿ ವಿಚಾರಕ್ಕೆ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಕರುವಿನ ಮೇಲೆ ಅನೈಸರ್ಗಿಕ ಲೈಂಗಿಕ ಕ್ರಿಯೆ- ಯುವಕ ಅರೆಸ್ಟ್
Advertisement
Advertisement
ರಾಜಾನುಕುಂಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿ, ಗಾಯಾಳು ವಿದ್ಯಾರ್ಥಿಯನ್ನು ಸ್ಪರ್ಶ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ (Bengaluru Rural) ಎಸ್ಪಿ ಸಹ ಭೇಟಿ ನೀಡಿ ವಿಚಾರಣೆ ನಡೆಸಲಿದ್ದಾರೆ. ಇದನ್ನೂ ಓದಿ: ಆಸ್ಟ್ರೇಲಿಯಾ ಬೀಚ್‌ನಲ್ಲಿ ಭೀಕರ ಹೆಲಿಕಾಪ್ಟರ್ ದುರಂತ – ನಾಲ್ವರು ಸಾವು, ಮೂವರಿಗೆ ಗಾಯ
Advertisement
Advertisement
19 ವರ್ಷದ ಲಯಸ್ಮಿತ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಬಿ.ಟೆಕ್ ಓದುತ್ತಿದ್ದಳು. ಇಂದು ಅಲ್ಲಿಗೆ ಬಂದಿದ್ದ ಸ್ಪರ್ಶ್ ಕ್ಲಾಸ್ ರೂಮಿನಲ್ಲಿದ್ದ ಲಯಸ್ಮಿತಾಗೆ ಹೊರಗೆ ಬರಲು ಹೇಳಿದ್ದಾನೆ. ಆಕೆ ಬಂದ ಕೂಡಲೇ 10ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಂದಿದ್ದಾನೆ. ಬಳಿಕ ತಾನೂ ಕೂಡ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಸ್ಥಳಕ್ಕಾಗಿಮಿಸಿರುವ ಪೊಲೀಸರು ಸ್ಪರ್ಶ್ನನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪವನ್ ಕಲ್ಯಾಣ್ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎಂದು ತಿಳಿಸಿದ್ದಾರೆ.
ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊಲೆ ಆರೋಪಿ ಪವನ್ ಕಲ್ಯಾಣ್, ನೃಪತುಂಗ ರಸ್ತೆಯಲ್ಲಿರೋ ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಇ ಪದವಿ ಓದುತ್ತಿದ್ದ.